ಏಷ್ಯನ್ ಗೇಮ್ಸ್​ಗೆ ಸಿಕ್ಕಿತು ಅದ್ದೂರಿ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

19ನೇ ಆವೃತ್ತಿಯ ಏಷ್ಯನ್ ಗೇಮ್ಸ್​ಗೆ ಚೀನಾದ ಹಾಂಗ್​ಝೌನಲ್ಲಿ ಚಾಲನೆ ದೊರೆತಿದೆ.

ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಒಲಿಂಪಿಕ್ಸ್​ನ ಕಂಚಿನ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್ ತ್ರಿವರ್ಣ ಧ್ವಜ ಹಿಡಿದು ಭಾರತ ತಂಡವನ್ನು ಮುನ್ನಡೆಸಿದರು. ವರ್ಣರಂಜಿತವಾಗಿದ್ದ ಈ ಕಾರ್ಯಕ್ರಮದಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಮುಖ್ಯ ಅತಿಥಿಯಾಗಿ ಕಾಣಿಸಿಕೊಂಡರು.

ಈ ಬಾರಿಯ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಸೆಪ್ಟೆಂಬರ್ 19 ರಿಂದ ಶುರುವಾಗಿದೆ. ಅಂದರೆ ಆರಂಭದಲ್ಲಿ ಕೆಲ ಪಂದ್ಯಗಳ ಅರ್ಹತಾ ಸುತ್ತುಗಳು ನಡೆದಿದ್ದು, ಕೆಲ ಪಂದ್ಯಗಳನ್ನು ಆಯೋಜಿಸಲಾಗಿದೆ. ಇದೀಗ ಉದ್ಘಾಟನಾ ಕಾರ್ಯಕ್ರಮದ ಮೂಲಕ ಎಲ್ಲಾ ಕ್ರೀಡಾಕೂಟಗಳಿಗೂ ಚಾಲನೆ ನೀಡಲಾಗಿದೆ.

https://twitter.com/WeAreTeamIndia?ref_src=twsrc%5Etfw%7Ctwcamp%5Etweetembed%7Ctwterm%5E1705549064312697322%7Ctwgr%5E6009f2a3d0969b3c4d66e67563038fb2d4e85b97%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadadunia-epaper-kannadad%2Ftopnews-updates-topnews%3Fmode%3Dpwaaction%3Dclick

ಈ ಬಾರಿಯ ಕ್ರೀಡಾಕೂಟದಲ್ಲಿ ಒಟ್ಟು 45 ದೇಶಗಳ 12 ಸಾವಿರಕ್ಕೂ ಕ್ರೀಡಾಪಟುಗಳು ಕಾಣಿಸಿಕೊಂಡಿದ್ದಾರೆ. ಈ ಕ್ರೀಡಾಪಟುಗಳು 40 ಸ್ಪರ್ಧೆಗಳಲ್ಲಿ ಕಣಕ್ಕಿಳಿಯಲಿದ್ದು, ಈ ಮೂಲಕ ಚಿನ್ನದ ಪದಕಕ್ಕಾಗಿ ಪೈಪೋಟಿ ನಡೆಸಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!