ವಾಷಿಂಗ್‌ಟನ್‌ ಡಿಸಿಯಲ್ಲಿ ಗುಂಡಿನ ದಾಳಿ, ಬಾಲಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಮೆರಿಕಾದಲ್ಲಿ ಮ್ಯೂಸಿಕ್ ಕಾನ್ಸರ್ಟ್ ನಡೆಯುತ್ತಿದ್ದ ಜಾಗದ ಬಳಿ ಶೂಟಿಂಗ್ ನಡೆದಿದೆ. ಗುಂಡಿನ ದಾಳಿಯಲ್ಲಿ 15ವರ್ಷದ ಬಾಲಕ ಸಾವನ್ನಪ್ಪಿದ್ದು, ಪೊಲೀಸ್ ಅಧಿಕಾರಿ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಾಷಿಂಗ್‌ಟನ್‌ನ ಯು ಸ್ಟ್ರೀಟ್, ನಾರ್ತ್‌ವೆಸ್ಟ್ 14 ಮತ್ತು ಯು ಸ್ಟ್ರೀಟ್‌ನ 1400 ಬ್ಲಾಕ್‌ನಲ್ಲಿ ಜೂನ್ 19ರ ರಾತ್ರಿ ಘಟನೆ ನಡೆದಿದೆ.

ಗುಂಡಿನ ದಾಳಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಘಟನೆಯ ಕುರಿತು ಮಾತನಾಡಿದ ಡಿಸಿ ಪೊಲೀಸ್ ಮುಖ್ಯಸ್ಥ ರಾಬರ್ಟ್ ಕಾಂಟಿ ಕಾನ್ಸರ್ಟ್‌ ನಡೆಸಲು ನಗರದೊಳಗೆ ಅನುಮತಿ ನಿರಾಕರಿಸಲಾಗಿತ್ತು. ಆದರೂ ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಬೇಕೇ ಬೇಡವೇ ಎಂಬುದರ ಕುರಿತು ಅಟಾರ್ನಿ ಜನರಲ್ ಜತೆ ಚರ್ಚಿಸುವುದಾಗಿ ತಿಳಿಸಿದರು.

ಘಟನಾ ಸ್ಥಳದಲ್ಲಿದ್ದ ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 2 ಗಂಟೆಗಳ ಅವಧಿಯಲ್ಲಿ ಈ ದುರಂತ ಸಂಭವಿಸಿದೆ ಎಂದು ರಾಬರ್ಟ್ ಕಾಂಟಿ ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!