ಹೊಸದಿಗಂತ ವರದಿ ವಿಜಯಪುರ:
ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ವಿಜಯಪುರ ತಾಲೂಕಿನ ಅತ್ತಾಲಟ್ಟಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ರಾಜು ಗರುಡ್ಕರ ಹತ್ಯೆಯಾದ ವ್ಯಕ್ತಿ.
ದುಷ್ಕರ್ಮಿಗಳು ಏಕಾಏಕಿ ರಾಜು ಮೇಲೆ ಹರಿತವಾದ ಆಯುಧದಿಂದ ಹೊಡೆದು ಹತ್ಯೆಗೈದು ಪರಾರಿಯಾಗಿದ್ದಾರೆ. ಹತ್ಯೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.