ವಿಧಾನಸಭೆಯಲ್ಲಿ ಇಂದು ಶಿಕ್ಷಕರ ವರ್ಗಾವಣೆ ಮಸೂದೆ ಅಂಗೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವಿಧಾನಸಭೆಯಲ್ಲಿ ಇಂದು ಶಿಕ್ಷಕರ ವರ್ಗಾವಣೆ ಮಸೂದೆ ಅಂಗೀಕಾರವಾಗಿದೆ. ಈ ಮೂಲಕ ಪರಸ್ಪರ ವರ್ಗಾವಣೆ ಹಾಗೂ ಪತಿ ಪತ್ನಿ ವರ್ಗಾವಣೆಗೆ ಅವಕಾಶವಿದ್ದು, ಇತರ ಶಿಕ್ಷಕರ ಕೌನ್ಸೆಲಿಂಗ್​ ಮೂಲಕ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ, ಪ್ರೌಢ ಶಿಕ್ಷಕರಿಗೆ ಕೌನ್ಸೆಲಿಂಗ್​ ಮೂಲಕ ವರ್ಗಾವಣೆಗೆ ಅವಕಾಶ ನೀಡಲಾಗಿದೆ.
ಪ್ರೌಢ ಶಿಕ್ಷಣ ಮಂಡಳಿ ತಿದ್ದುಪಡಿ ವಿಧೇಯಕ ಸಹ ಅಂಗೀಕಾರ ಮಾಡಲಾಗಿದೆ. ಇದರಿಂದ ಎಸ್​ಎಸ್​ಎಲ್​ಸಿ-ಪಿಯುಸಿ ಪರೀಕ್ಷಾ ಮಂಡಳಿ ವಿಲೀನಕ್ಕೆ ಅವಕಾಶ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಒಂದೇ ಮಂಡಳಿಯಿಂದ ಪಿಯುಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!