ಮಣಿಪುರದಲ್ಲಿ ಪೊಲೀಸರನ್ನು ಕೊಂದು ಶಸ್ತ್ರಾಸ್ತ್ರ ಕದ್ದೊಯ್ದ ದಾಳಿಕೋರರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು, ದಾಳಿಕೋರರ ಗುಂಪೊಂದು ಪೊಲೀಸರ ಮೇಲೆ ದಾಳಿ ನಡೆಸಿದೆ.

ಬಿಷ್ಣುಪುರದ ಕೀರೆನ್‌ಫಾಬಿ ಪೊಲೀಸ್ ಔಟ್‌ಪೋಸ್ಟ್ ಬಳಿ ಪೊಲೀಸರನ್ನು ಕೊಂದು ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಕದ್ದೊಯ್ದಿದ್ದಾರೆ.

ಬಂದೂಕು, ಮದ್ದುಗುಂಡುಗಳು ಹಾಗೂ ಇನ್ನಿತರ ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಗುಂಪುದಾಳಿ ಇದಾಗಿದ್ದು, ಗುಂಪಿನಲ್ಲಿ ಮಹಿಳೆಯರೂ ಸೇರಿ 500ಕ್ಕೂ ಹೆಚ್ಚು ಮಂದಿ ಇದ್ದರು. ಗುಂಪನ್ನು ಚದುರಿಸಲು ಭದ್ರತಾ ಪಡೆಗಳು ಎಲ್ಲ ಪ್ರಯತ್ನ ಮಾಡಿವೆ. ದಾಳಿಕೋರರು ಶಸ್ತ್ರಾಸ್ತ್ರಗಳನ್ನು ಕದ್ದು ಪರಾರಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!