ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಇದಕ್ಕೆ ಹೋರಾಟ ಮಾಡಿದ ಸಂಘಟನೆಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್ ನಿಲ್ದಾಣದಲ್ಲಿ ಜನ ಇಲ್ಲ. ಕನ್ನಡಿಗರಿಗಾಗಿ ಕರೆದ ಬಂದ್ ಯಶಸ್ವಿ ಆಗಿದೆ. ನಾವು ಮಾಡಿರೋ ಹೋರಾಟದಲ್ಲಿ ಒಂದು ಹನಿ ನೀರು ಸಿಗದ ರೀತಿ ಆಗಬೇಕಿತ್ತು. ಆದರೂ ಯಶಸ್ಸು ಸಿಕ್ಕಿದೆ. ಬಂದ್‌ನ ಬೇಡಿಕೆ ಸರ್ಕಾರದ ಮುಂದೆ ಇಟ್ಟಿದ್ದೇವೆ ಎಂದು ತಿಳಿಸಿದ್ದಾರೆ.