ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರಿಗಾಗಿ ನಡೆಯುತ್ತಿರುವ ʻಬೆಂಗಳೂರು ಬಂದ್ʼ ಬಿಸಿ ರೋಗಿಗಳ ಮೇಲೆ ಪರಿಣಾಮ ಬೀರಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳಬೇಕಿದ್ದ ಪ್ರಯಾಣಿಕರು ಬಸ್ ಸಿಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ನೆರೆಯ ಆಂಧ್ರಪ್ರದೇಶದಿಂದ ಬಂದಿದ್ದ ಪ್ರಯಾಣಿಕರು ಶಿವಮೊಗ್ಗದ ಮಾನಸ ಆಸ್ಪತ್ರೆಗೆ ಭೇಟಿ ಕೊಡಬೇಕಿತ್ತು. ಮೆಜೆಸ್ಟಿಕ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿದ್ದರೂ ಪ್ರಯಾಣಕರಿಲ್ಲದ ಕಾರಣ, ಬಸ್ ಹೊರಡಲು ಸಿದ್ಧವಿಲ್ಲ. ಹೀಗಾಗಿ ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ರೋಗಿಗಳು ಅಳಲು ತೋಡಿಕೊಂಡರು.