Saturday, December 9, 2023

Latest Posts

‘ಬೆಂಗಳೂರು ಬಂದ್’ ಗೆ ಸಿಗಲಿದೆ ಖಾಸಗಿ ಶಾಲೆ ಒಕ್ಕೂಟಗಳ ಸಾಥ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸೆ.26 ರಂದು ಕರೆ ನೀಡಿದ ‘ಬೆಂಗಳೂರು ಬಂದ್’ ಗೆ ಖಾಸಗಿ ಶಾಲೆ ಒಕ್ಕೂಟಗಳು ಬೆಂಬಲ ನೀಡಿದೆ.
ಈ ಬಗ್ಗೆ ಕ್ಯಾಮ್ಸ್ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದು, ಬೆಂಗಳೂರು ಬಂದ್’ ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಬಂದ್ ದಿನ ಕಪ್ಪು ಪಟ್ಟಿ ಧರಿಸಿ ನೈತಿಕ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದರು .

ರಜೆ ನೀಡುವ ವಿಚಾರದಲ್ಲಿ ತಟಸ್ಥವಾಗಿದ್ದು, ಈ ಕುರಿತು ಒಂದು ದಿನ ಪರಿಸ್ಥಿತಿ ಅವಲೋಕಿಸಿ ರಜೆ ನೀಡುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಅವರು ಹೇಳಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಕರ್ನಾಟಕ ಜಲಸಂರಕ್ಷಣಾ ಸಮಿತಿಯಿಂದ ಫ್ರೀಡಂ ಪಾರ್ಕ್ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಬೆಂಗಳೂರಿನ ಪ್ರಮುಖ ಅಪಾರ್ಟ್ ಮೆಂಟ್ ಅಸೋಸಿಯೇಷನ್, ಲೇಔಟ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಐಟಿ ಕಂಪನಿಗಳು ಭಾಗಿಯಾಗಿದ್ದವು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!