ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಯೋಜನೆಗೊಳ್ಳಲಿದೆ ಬೆಂಗಳೂರು ಟೆಕ್ ಸಮ್ಮಿಟ್

ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು:
ಬೆಂಗಳೂರು ಟೆಕ್ ಸಮ್ಮಿಟ್ 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬೆಂಗಳೂರು ಟೆಕ್ ಸಮ್ಮಿಟ್ ಅನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರು ಟೆಕ್ ಸಮ್ಮಿಟ್ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ನವೆಂಬರ್ ತಿಂಗಳಲ್ಲಿ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜಿಸಿರುವ ಪ್ರಯುಕ್ತ ವಿವಿಧ ವಲಯದ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಹಲವಾರು ಸಲಹೆಗಳನ್ನೂ ಪಡೆದುಕೊಳ್ಳಲಾಗಿದೆ. ಕೈಗಾರಿಕೆಗಳಿಗೆ ಪೂರಕವಾದ ನೀತಿಗಳು, ಇಕೋ ಸಿಸ್ಟಂ, ಮೂಲಸೌಕರ್ಯ, ತಾಂತ್ರಿಕತೆಗಳ ಬಗ್ಗೆ ಬಹಳಷ್ಟು ಸಲಹೆಗಳನ್ನು ಕೈಗಾರಿಕೋದ್ಯಮಿಗಳು ನೀಡಿದ್ದಾರೆ. ಅವುಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.
ತಾಂತ್ರಿಕ ಕ್ಷೇತ್ರಕ್ಕೆ ಹೊಸ ಆಯಾಮ:
ಬೆಂಗಳೂರು ಸಮ್ಮಿಟ್ ತಾಂತ್ರಿಕ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವಲ್ಲಿ ಇಂದಿನ ಸಭೆ ಫಲಪ್ರದವಾಗಿದೆ. ಮುಂಬರುವ ದಿನಗಳಲ್ಲಿ ವಿವಿಧ ಕೈಗಾರಿಕಾ ವಲಯಗಳಿಗೂ ಸರಕಾರ ಇಂಬು ನೀಡಲಿದೆ. ಬೆಂಗಳೂರನ್ನು ವಿಶ್ವದಲ್ಲಿಯೇ ನಂ.1 ಸಿಲಿಕಾನ್ ಸಿಟಿ ಮಾಡುವ ಚಿಂತನೆ ಸರಕಾರಕ್ಕಿದೆ. ಬೆಂಗಳೂರಿನ ಹೊರವಲಯಗಳಲ್ಲಿಯೂ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!