Tuesday, July 5, 2022

Latest Posts

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಜನತೆಗೆ ಸಚಿವ ಪ್ರಭು ಕೃತಜ್ಞತೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………


ಹೊಸ ದಿಗಂತ ವರದಿ, ಬೀದರ್:

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಅವರನ್ನು ಗೆಲ್ಲಿಸಿದ ಬಸವಕಲ್ಯಾಣದ ಎಲ್ಲಾ ಮತದಾರರಿಗೆ ಸಚಿವರಾದ ಪ್ರಭು ಚವ್ಹಾಣ್ ಅವರು ಅನಂತ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಚುನಾವಣೆ ಮುಗಿಯವವರೆಗೆ ಬಸವಕಲ್ಯಾಣದಲ್ಲಿ ವಾಸ್ತವ್ಯ ಮಾಡಿ, ಮನೆ-ಮನೆಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದೆ. ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಪಕ್ಷದ ನಾಯಕರಾದ ಅರುಣಸಿಂಗ್, ಸಿ.ಟಿ ರವಿ ಹಾಗೂ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ವಸತಿ ಸಚಿವರಾದ ವಿ.ಸೋಮಣ್ಣ, ಸಂಸದ ಭಗವಂತ ಖೂಬಾ ಸೇರಿದಂತೆ ಅನೇಕ ಗಣ್ಯರು ಬಸವಕಲ್ಯಾಣದಲ್ಲಿ ಪ್ರಚಾರ ಮಾಡಿದ್ದರು.
ಜನತೆ ತಾವು ನಿರೀಕ್ಷಿಸಿದಂತೆ ಅಭಿವೃದ್ಧಿ ಪರವಾಗಿರುವ ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದಾರೆ. ಹೆಚ್ಚಿನ ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ನೀಡಿದ್ದಾರೆ. ಕಳೆದ ಲಾಕ್‍ಡೌನ್ ಸಂದರ್ಭದಲ್ಲಿ ಶರಣು ಸಲಗರ್ ಸಲ್ಲಿಸಿದ ಸೇವೆಗೆ ಗೌರವ ನೀಡಿದ್ದಾರೆ. ಬಡವರ ಪರ ಅತ್ಯಂತ ಕಾಳಜಿ ಹೊಂದಿರುವ ಹಾಗೂ ಅಭಿವೃದ್ಧಿಯ ಕುರಿತು ವಿಭಿನ್ನ ಚಿಂತನೆಗಳನ್ನು ಹೊಂದಿರುವ ಶರಣು ಸಲಗರ್ ಅವರಿಗೆ ವಿಜಯಮಾಲೆ ತೊಡಿಸುವ ಮುಲಕ ಸೂಕ್ತ ಪ್ರತಿನಿಧಿಯನ್ನು ಆಯ್ಕೆ ಮಾಡಿದ್ದಾರೆ.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ. ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಬಸವಕಲ್ಯಾಣದ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ಈಗಾಗಲೇ ಜನತೆಯ ಬಹುದಿನಗಳ ಬೇಡಿಕೆಯಾಗಿರುವ ಅನುಭವ ಮಂಟಪಕ್ಕೆ ಅನುದಾನ ನೀಡಿ, ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಇದೀಗ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಿದ್ದರಿಂದ ಕಲ್ಯಾಣದ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ ಎಂದು ತಿಳಿಸಿದ್ದಾರೆ.
ತಾವು ಬಸವಕಲ್ಯಾಣದ ಏಳಿಗೆಗೆ ಬದ್ಧನಾಗಿದ್ದು, ತಾಲೂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ಶರಣು ಸಲಗರ್ ಅವರ ಜೊತೆಗಿರುತ್ತೇನೆ. ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ, ಬಸವಕಲ್ಯಾಣದಲ್ಲಿ ಇನ್ನು ಆಗಬೇಕಿರುವ ಎಲ್ಲಾ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರುತ್ತೇನೆ. ಎಲ್ಲಾ ಕೆಲಗಳನ್ನು ಶೀಘ್ರ ಪೂರ್ಣಗೊಳಿಸಲು ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss