ಇಡೀ ದೇಶದಲ್ಲಿ ನಮ್ಮ ರಾಜ್ಯದ ಪೊಲೀಸ್ ಇಲಾಖೆಗೆ ಉತ್ತಮ ಹೆಸರು: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಂಗಳೂರಿನ ಮೈಸೂರು ರಸ್ತೆಯ ಸಿಎಎರ್ ಮೈದಾನದಲ್ಲಿ ಪೊಲೀಸ್ ಸಂಸ್ಮರಣಾ ದಿನಾಚರಣೆ ಆಚರಿಸಿದ್ದು, ಸಿಎಂ ಸಿದ್ದರಾಮಯ್ಯ ದೇಶದಲ್ಲಿ ನಮ್ಮ ರಾಜ್ಯದ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿದೆ ಎಂದು ಹೇಳಿದ್ದಾರೆ.

ಕರ್ತವ್ಯ ನಿರತರಾಗಿದ್ದಾಗ ಪ್ರಾಣತ್ಯಾಗ ಮಾಡಿದವರ ನೆನಪಿಗಾಗಿ ಈ ದಿನ ಆಚರಣೆ ಮಾಡಲಿದ್ದು, ಈ ವರ್ಷ ರಾಜ್ಯದಲ್ಲಿ 16 ಪೊಲೀಸರು ಕರ್ತವ್ಯದ ಸಮಯದಲ್ಲಿ ಹುತಾತ್ಮರಾಗಿದ್ದು, ಹುತಾತ್ಮರಾದ ಅಧಿಕಾರಿ, ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರು ಗೌರವ ಸಮರ್ಪಣೆ ಸಲ್ಲಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರು, ಕೆಲಸದ ವೇಳೆ ಅನೇಕ ಅಪಾಯಗಳನ್ನು ಎದುರಿಸುತ್ತಾರೆ. ಎಷ್ಟೋ ಮಂದಿ ಕರ್ತವ್ಯದ ಸಮಯದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಈ ರೀತಿ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!