ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್‌ಬಾಸ್ ಸೀಸನ್ ಹತ್ತರ ಕಾಮ್ ಆಂಡ್ ಸೈಲೆಂಟ್ ಸ್ಪರ್ಧಿ ಎಂದೇ ಹೆಸರುವಾಸಿಯಾಗಿದ್ದ ಸಿರಿ ಇದೀಗ ಹಸೆಮಣೆ ಏರಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿನ ಭೋಗ ನಂದೀಶ್ವರ ದೇವಾಲಯದಲ್ಲಿ ಸಿರಿ ಮತ್ತು ಉದ್ಯಮಿ ಪ್ರಭಾಕರ್ ಮದುವೆ ಗುರುಹಿರಿಯರ ಸಮ್ಮುಖದಲ್ಲಿ ಜರುಗಿದೆ. ಪ್ರಭಾಕರ್ ಅವರು ಮೂಲತಃ ಮಂಡ್ಯದವರಾಗಿದ್ದು, ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಕೇವಲ ಆಪ್ತರಿಗೆ ಮಾತ್ರ ಸಿರಿ ಆಮಂತ್ರಣ ನೀಡಿದ್ದು, ದೇವಸ್ಥಾನದಲ್ಲಿ ಸಿಂಪಲ್ ಆಗಿ ಮದುವೆಯಾಗಿದ್ದಾರೆ.