ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಿಡದಿಯ ಹೊರಭಾಗದಲ್ಲಿರುವ ಜಾಲಿವುಡ್‌ನ ಒಳಗೆ ಈ ಬಾರಿ ಬಿಗ್‌ಬಾಸ್ ಸೆಟ್ ನಿರ್ಮಾಣ ಮಾಡಲಾಗಿದೆ. ಇದೀಗ ಜಾಲಿವುಡ್‌ನ್ನು ಮಾಲೀನ್ಯ ನಿಯಂತ್ರಣ ಮಂಡಳಿ ಬಂದ್ ಮಾಡಿದೆ.
ಸದ್ಯಕ್ಕೆ ಬೀಗ ಜಡಿದು ರಾತ್ರಿ 7:30ರೊಳಗೆ ಬಿಗ್‌ಬಾಸ್ ಮನೆಯನ್ನು ಖಾಲಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಜಾಲಿವುಡ್‌ಗೆ ಬಂದಿರೋ ಜನರನ್ನು ಹೊರಗೆ ಕಳಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ.
ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ ಟೈನ್ಮೆಂಟ್ ಪ್ರೈ. ಲಿ. (ಜಾಲಿ ವುಡ್ ಸ್ಟುಡಿಯೋ)ಗೆ ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು. 2 ಬಾರಿ ಈ ಹಿಂದೆಯೇ ನೋಟಿಸ್ ನೀಡಲಾಗಿತ್ತು. ಹೀಗಾಗಿ ಇಂದು ಅಧಿಕಾರಿಗಳು ಬಂದು ಬಾಗಿಲಿಗೆ ಬೀಗ ಜಡೆದಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಈ ಸ್ಟುಡಿಯೋ, ಕೊಳಚೆ ನೀರನ್ನು ಸಂಸ್ಕರಿಸದೆ ನೇರವಾಗಿ ಮೋರಿಗೆ ಹರಿಬಿಡುತ್ತಿದೆ. ಇದು ಜಲ ಮಾಲಿನ್ಯ ನಿಯಂತ್ರಣ ಮತ್ತು ಸಂರಕ್ಷಣೆ ಕಾಯ್ದೆ 1974ರ ಉಲ್ಲಂಘನೆ ಹಿನ್ನೆಲೆಯಲ್ಲಿ, ಸ್ಟುಡಿಯೋವನ್ನು ಮುಚ್ಚಲು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಆದೇಶಿಸಿತ್ತು.