Saturday, October 1, 2022

Latest Posts

ಗುಂಡಿ ತಪ್ಪಿಸಲು ಹೋಗಿ ಲಾರಿ ಕೆಳಗೆ ನುಗ್ಗಿದ ಬೈಕ್‌ ಸವಾರ: ಭಯಾನಕ ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ವಾಹನದ ಜೊತೆಗೆ ರಸ್ತೆಗಿಳಿದರೆ ಜಾಗೃತರಾಗಿರಿ….ಯಮಸ್ವರೂಪಿ ಗುಂಡಿಗಳು ರಕ್ಕಸರಂತೆ ಕಾಯುತ್ತಿರುತ್ತವೆ. ಅದರಲ್ಲೂ ರಾತ್ರಿಯಾದರೆ ರಸ್ತೆಯಲ್ಲಿ ಗುಂಡಿಗಳು ಕಾಣುವುದಿಲ್ಲ, ಇಂತಹ ಸಂದರ್ಭದಲ್ಲಿ ವಾಹನ ಸವಾರರು ನಿಷ್ಕಾಳಜಿ ವಹಿಸಿ ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ಇಂತಹದೊಂದು ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಗುಂಡಿ ಇದ್ದುದರಿಂದ ದ್ವಿಚಕ್ರ ವಾಹನ ಬ್ಯಾಲೆನ್ಸ್ ತಪ್ಪಿ ಲಾರಿ ಕೆಳಗೆ ಬಿದ್ದಿದೆ. ಲಾರಿ ಚಾಲಕನ ಮೇಲೆ ಹರಿದಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗಣೇಶ್ ಫಾಲೆ ಎಂಬ ವ್ಯಕ್ತಿ ಭಾನುವಾರ ತನ್ನ ಮೋಟಾರು ಸೈಕಲ್‌ನಲ್ಲಿ ದಿವಾ – ಅಗಸನ್ ರಸ್ತೆಯಲ್ಲಿ ಹೋಗುತ್ತಿದ್ದ. ರಸ್ತೆಯಲ್ಲಿ ಗುಂಡಿಗಳಿದ್ದು ರಾತ್ರಿಯಾಗಿರುವುದರಿಂದ ನಿಧಾನವಾಗಿ ಹೋಗುತ್ತಿದ್ದರು. ಅದೇ ವೇಳೆ ಎದುರಿಗೆ ಲಾರಿಯೊಂದು ಬಂದಿದ್ದು, ರಸ್ತೆಯಲ್ಲಿದ್ದ ಗುಂಡಿಯಿಂದಾಗಿ ಬೈಕ್ ನಿಯಂತ್ರಣ ತಪ್ಪಿ ಲಾರಿಯಡಿಗೆ ಹರಿದಿದೆ.

ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಪಘಾತದ ವಿಡಿಯೋವನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಶಾಸಕ ರಾಜು ಪಾಟೀಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಈ ಪೋಸ್ಟ್ ಅನ್ನು ಟ್ಯಾಗ್ ಮಾಡಿದ್ದಾರೆ. ಈ ಸಂಬಂಧ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮರು ಟ್ವೀಟ್ ಮಾಡುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!