ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿದೆ.
ಪಂಜಾಬ್ ಕಿಂಗ್ಸ್ ನೀಡಿದ್ದ 158ರನ್‌ಗಳ ಸಾಧಾರಣ ಗುರಿಯನ್ನ ಇನ್ನು 7 ಎಸೆತಗಳಿರುವಂತೆ ಸುಲಭವಾಗಿ ಚೇಸ್ ಮಾಡಿ ಗೆಲುವು ಸಾಧಿಸಿದೆ. ಇದು ಆರ್ಸಿಬಿಗೆ ಈ ವರ್ಷ ಸಿಕ್ಕಂತಹ 5ನೇ ಗೆಲುವಾಗಿದೆ. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.
ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡವು ಮೊದಲ ಓವರ್‌ನಲ್ಲೇ ಫಿಲ್ ಸಾಲ್ಟ್ ವಿಕೆಟ್ ಕಳೆದುಕೊಂಡಿತು. ಫಿಲ್ ಸಾಲ್ಟ್ ಕೇವಲ ಒಂದು ರನ್ ಗಳಿಸಿ ಅರ್ಶದೀಪ್ ಸಿಂಗ್‌ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಜತೆಯಾದ ಕನ್ನಡಿಗ ದೇವದತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಆಕರ್ಷಕ ಶತಕದ ಜತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ಯಿತು.
ಸ್ಪೋಟಕ ಬ್ಯಾಟಿಂಗ್ ನಡೆಸಿದ ದೇವದತ್ ಪಡಿಕ್ಕಲ್ 35 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 61 ರನ್ ಗಳಿಸಿ ಹಪ್ರೀತ್ ಬ್ರಾರ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ 54 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 73 ರನ್ ಗಳಿಸಿ ಅಜೇಯರಾಗುಳಿದರು. ಇನ್ನು ಮತ್ತೊಂದು ತುದಿಯಲ್ಲಿ ನಾಯಕ 12 ರನ್ ಗಳಿಸಿದರೆ, ಜಿತೇಶ್ ಶರ್ಮಾ 11 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.