ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಮೇ 12ರಿಂದ 15ರವರೆಗೆ ಆಯೋಜನೆಗೊಂಡಿರುವ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಾನು ಭಾಗಿಯಾಗುತ್ತಿಲ್ಲ ಎಂದು ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸ್ಪಷ್ಟನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ರಾಹುಲ್ ದ್ರಾವಿಡ್ ಭಾಗಿಯಾಗಲಿದ್ದಾರೆ ಎಂಬ ಸುದ್ದಿ ಮಾಧ್ಯಮಗಳ ಮೂಲಕ ಹಬ್ಬಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ರಾಹುಲ್ , ಈ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುತ್ತಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಸುದ್ದಿ ಸುಳ್ಳು ಎಂದು ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ