ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ಕಲಾಪದಲ್ಲಿ ಅತಿರೇಕದ ವರ್ತನೆ ತೋರಿದ ಬಿಜೆಪಿಯ ೧೦ ಶಾಸಕರನ್ನು ಅಮಾನತು ಮಾಡಲಾಗಿದ್ದು, ಈ ಸಂಬಂಧ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಲಾಗಿದೆ.
ಬಿಜೆಪಿ ನಡೆಸುತ್ತಿರುವ ಧರಣಿಗೆ ಜೆಡಿಎಸ್ ಕೂಡ ಸಾಥ್ ನೀಡಿದ್ದು, ಎರಡೂ ಪಕ್ಷಗಳು ಸದನದಲ್ಲಿ ಪಾಲ್ಗೊಳ್ಳುವುದನ್ನು ಬಹಿಷ್ಕರಿಸಿದೆ. ಸ್ಪೀಕರ್ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದು, ಇದನ್ನು ವಿರೋಧಿಸಿ ಬಿಜೆಪಿ ನಿನ್ನೆಯಿಂದಲೂ ಪ್ರತಿಭಟನೆ ಮಾಡುತ್ತಿದೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿ.ಟಿ. ರವಿ, ನಳಿನ್ ಕುಮಾರ್ ಕಟೀಲು,ಸುನಿಲ್ ಕುಮಾರ್, ರಮೇಶ್ ಜಾರಕಿಹೊಳಿ, ಪ್ರಭು ಚೌಹಾಣ್, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಸೇರಿದಂತೆ ಇತರರು ದೂರು ನೀಡಿದ್ದಾರೆ.