spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಾಂಸ್ಕೃತಿಕ ರಾಷ್ಟ್ರೀಯತೆ, ದೇಶಪ್ರೇಮ ಬಲಪಡಿಸುವುದೇ ಬಿಜೆಪಿಯ ಪ್ರಮುಖ ಧ್ಯೇಯ

- Advertisement -Nitte

ಹೊಸದಿಗಂತ ವರದಿ, ಮಂಡ್ಯ: 

ಸಾಂಸ್ಕೃತಿಕ ರಾಷ್ಟ್ರೀಯತೆಯನ್ನು ಬಲಪಡಿಸುವುದು ಮತ್ತು ದೇಶಪ್ರೇಮ, ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವುದು ಭಾರತೀಯ ಜನತಾ ಪಾರ್ಟಿಯ ಪ್ರಮುಖ ಧ್ಯೇಯವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ. ವಿಜಯಕುಮಾರ್ ಅಭಿಪ್ರಾಯಿಸಿದರು.

ಜಿಲ್ಲಾ ಬಿಜೆಪಿ ವತಿಯಿಂದ ನಗರದ ವಿಕಾಸ ಭವನದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ‌್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,  ವಿಶ್ವಾಸಾರ್ಹತೆ ಮತ್ತು ಖ್ಯಾತಿಯನ್ನು ಭಾರತೀಯ ರಾಜಕಾರಣಕ್ಕೆ ತರುವುದು ನಮ್ಮ ಉದ್ದೇಶವಾಗಿದ್ದುಘಿ, ಈ ನಿಟ್ಟಿನಲ್ಲಿ ಕೆಲಸ ಮಾಡುವುದು ಅಗತ್ಯ ಎಂದು ಪ್ರತಿಪಾದಿಸಿದರು.

1971 ರ ಲೋಕಸಭಾ ಚುನಾವಣೆಯಲ್ಲಿ  ಇಂದಿರಾಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು.  ಆದರೆ ಇಂದಿರಾಗಾಂಧಿ  ಚುನಾವಣಾ ಭ್ರಷ್ಠಾಚಾರದಲ್ಲಿ ತೊಡಗಿ ಆಯ್ಕೆಯಾಗಿದ್ದರು ಎಂದು ಆರೋಪಿಸಿ ಸಮಾಜವಾದಿ ಪಕ್ಷದ ರಾಜ್‌ನರೈನ್ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ನಾಲ್ಕು ವರ್ಷಗಳ ವಿಚಾರಣೆಯ ನಂತರ ಮುಖ್ಯನ್ಯಾಯಮೂರ್ತಿ ಜಗ್‌ಮೋಹನ್‌ಲಾಲ್ ಸಿನ್ಹಾ ಅವರು ಇಂದಿಗಾಂಧಿ ಚುನಾವಣಾ ದುಷ್ಕೃತ್ಯದಲ್ಲಿ ತಪ್ಪಿತಸ್ಥರೆಂದು ಪರಿಗಣಿಸಿ ತೀರ್ಪು ನೀಡಿದ್ದರು. ಇದರಿಂದಾಗಿ 1975ರಲ್ಲಿ ಇಂದಿರಾಗಾಂಧಿ ನೈತಿಕವಾಗಿ ರಾಜೀನಾಮೆ ನೀಡಬೇಕಿತ್ತುಘಿ. ಬದಲಾಗಿ ಅವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಸಲುವಾಗಿ ತುರ್ತು ಪರಿಸ್ಥಿತಿ ಘೋಷಿಸಿದರು. ದೇಶಾದ್ಯಂತ ಸಾವಿರಾರು ಮಂದಿ ನಾಯಕರು, ವಿರೋಧ ಪಕ್ಷಗಳ ಮುಖಂಡರು, ಕಾರ್ಮಿಕರನ್ನು ಜೈಲಿಗೆ ಹಾಕಲಾಯಿತು ಎಂದು ವಿವರಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss