ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರ್ ಇಂಡಿಯಾ ವಿಮಾನದ ಬ್ಲ್ಯಾಕ್ ಬಾಕ್ಸ್‌ಗಳನ್ನು ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂಬ ವರದಿಗಳನ್ನು ನಾಗರಿಕ ವಿಮಾನಯಾನ ಸಚಿವಾಲಯ ತಳ್ಳಿಹಾಕಿದೆ.
ಅಪಘಾತಕ್ಕೀಡಾದ ಏರ್ ಇಂಡಿಯಾ 171 ವಿಮಾನದ CVR/DFDR ಅನ್ನು ವಿಶ್ಲೇಷಣೆಗಾಗಿ ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಫ್ಲೈಟ್ ರೆಕಾರ್ಡರ್‌ಗಳನ್ನು ಡಿಕೋಡ್ ಮಾಡುವ ಸ್ಥಳದ ಬಗ್ಗೆ ಸೂಕ್ತ ಮೌಲ್ಯಮಾಪನದ ನಂತರ AAIB ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವಾಲಯ ಎಕ್ಸ್ ಪೋಸ್ಟ್‌ನಲ್ಲಿ ಸ್ಪಷ್ಟಪಡಿಸಿದೆ.
ಏರ್ ಇಂಡಿಯಾ ವಿಮಾನ 171 ರ ದುರಂತ ಅಪಘಾತದ ತನಿಖೆ ನಡೆಯುತ್ತಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ ಔಪಚಾರಿಕ ತನಿಖೆಯ ನೇತೃತ್ವ ವಹಿಸಿದೆ. ಇಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಊಹಾಪೋಹಗಳಿಂದ ದೂರವಿರಲು ಕೇಂದ್ರ ಸರ್ಕಾರ ಮನವಿ ಮಾಡಿದೆ.