ಹೊಸದಿಗಂತ ವರದಿ ಹುಬ್ಬಳ್ಳಿ:
ಕಾಂಗ್ರೆಸ್ ಹಾಗೂ ಭ್ರಷ್ಟಾಚಾರ ಎರಡು ಒಂದೇ ಆಗಿದೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮನೆಯ ಮುಂದೆ ಕಾಂಗ್ರೆಸ್ ನಾಯಕರು ಅಲೆದಾಡುವುದನ್ನು ನೋಡಿದರೆ ತಿಳಿಯುತ್ತದೆ. ದೇಶದಲ್ಲಿ ಭ್ರಷ್ಟಾಚಾರ ಎಂಬ ರಕ್ತ ಬೀಜಾಸುನನ್ನು ಹುಟ್ಟಿಸಿದ್ದು ಕಾಂಗ್ರೆಸ್ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದಿನ ಗವರ್ನರ್ ಆದವರು ಹಣ ನೀಡಿದರೆ ಮಾತ್ರ ಕಾಂಗ್ರೆಸ್ ನಲ್ಲಿ ಟಿಕೆಟ್ ದೊರೆಯುತ್ತದೆ ಎಂದು ಹೇಳುತ್ತಿದ್ದರು.
ದೇಶದಲ್ಲಿ ಭ್ರಷ್ಟಾಚಾರ ರಕ್ತ ಬೀಜಾಸುರರನ್ನು ಹುಟ್ಟಿಸಿದ್ದು, ಕಾಂಗ್ರೆಸ್. ಬಿಜೆಪಿ ವಿರುದ್ಧವಾಗಿ ಮಾತನಾಡಿದರೆ ಪ್ರಿಯಾಂಕಾ ಖರ್ಗೆ ರಾಷ್ಟ್ರೀಯ ನಾಯಕರಾಗುತ್ತಾರೆ ಎಂಬ ಭ್ರಮೆಯಲ್ಲಿದ್ದಾರೆ. ಕಾಂಗ್ರೆಸ್ ಬೂತ್ ಕಾಲದ ಪಕ್ಷವಾಗಿದೆ. ಆಧಾರ ರಹಿತ ಆರೋಪ ಮಾಡುವುದು ಅವರ ರೂಢಿ. ದೇಶ ಹಾಗೂ ರಾಜ್ಯದಲ್ಲಿಯೂ ಸಹ ಅವರ ಕಾಲದಲ್ಲಿ ಭ್ರಷ್ಟಾಚಾರ ಆರಂಭವಾಗಿದೆ ಎಂದು ಟೀಕಿಸಿದರು.
ಮಾಜಿ ಪ್ರಧಾನಿ ನೆಹರೂ ಕಾಲದಿಂದ ಹಿಡಿದು ಪ್ರಸ್ತುತ ಕಾಲದವರೆಗೂ ಹಗರಣಗಳನ್ನು ಮಾಡಿದ್ದಾರೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರಿಂದ ಹಿಡಿದು ಪ್ರೀಯಾಂಕ ಖರ್ಗೆ ಕಾಲದವರೆಗೆ ಭ್ರಷ್ಟಾಚಾರಮಯ ವ್ಯವಸ್ಥೆ ನಿರ್ಮಾಣ ಮಾಡಿದ್ದಾರೆ ಎಂದು ಹರಿಹಾಯ್ದರು