Monday, August 8, 2022

Latest Posts

ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………….

ಹೊಸ ದಿಗಂತ ವರದಿ ಮಡಿಕೇರಿ:

ಬುಧವಾರ ಸಂಜೆ ಅವಂದೂರು ಗ್ರಾಮದಲ್ಲಿ ನೀರು ಪಾಲಾದ ವಿಕಲಚೇತನ ವ್ಯಕ್ತಿಯ ಮೃತದೇಹ ಗುರುವಾರ ಪತ್ತೆಯಾಗಿದೆ.
ಅವಂದರೂರು ಗ್ರಾಮದ ಬೊಮ್ಮಗೌಡನ ಬಾಬಿ ಚಿಣ್ಣಪ್ಪ (70) ಅವರು ಬುಧವಾರ ಸಂಜೆ ತುಂಬಿ ಹರಿಯುತ್ತಿರುವ ಕಿರು ಹೊಳೆ ದಾಟುವ ಸಂದರ್ಭ ನೀರನಲ್ಲಿ ಕೊಚ್ಚಿ ಹೋಗಿದ್ದರು.
ಅವರಿಗಾಗಿ ಹುಡುಕಾಟ ನಡೆಸಿದರೂ, ಮಳೆಯ ಅಬ್ಬರ ಹಾಗೂ ನೀರಿನ ಹರಿವು ಹೆಚ್ಚಿದ್ದ ಪರಿಣಾಮ ಶೋಧ ಕಾರ್ಯಕ್ಕೆ ಅಡಚಣೆಯಾಗಿತ್ತು.
ಗುರುವಾರ ಬೆಳಗ್ಗೆ,ಗ್ರಾಮಸ್ಥರು ಮತ್ತೆ ಹುಡುಕಾಟ ನಡೆಸಿದಾಗ ಘಟನೆ ನಡೆದ ಸ್ಥಳದಿಂದ 300 ಅಡಿ ದೂರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ತೆರಳಿದ ಮಡಿಕೇರಿ ಗ್ರಾಮಾಂತ ಪೊಲೀಸರು ಮಹಜರು ನಡೆಸಿ ಶವವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss