ಮನೆಯ ಕೋಣೆಯಲ್ಲಿ ತಾಯಿ-ಮಗಳ ಮೃತದೇಹ ಪತ್ತೆ, ಸ್ಥಳದಲ್ಲಿ ಪೊಲೀಸರ ಪರಿಶೀಲನೆ

ಹೊಸದಿಗಂತ ವರದಿ ಉಡುಪಿ:

ಸೋಮವಾರ ಬೆಳಿಗ್ಗೆ ಆತ್ರಾಡಿ ಗ್ರಾ.ಪಂ ವ್ಯಾಪ್ತಿಯ ಮದಗದಲ್ಲಿ ತಾಯಿ ಮತ್ತು 10 ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ. ಚೆಲುವಿ ( 28) ಹಾಗೂ ಪ್ರಿಯಾ (10) ಮೃತದೇಹವು ಮನೆಯ ಕೋಣೆಯಲ್ಲಿ ಪತ್ತೆಯಾಗಿದ್ದು, ಬಾಯಿಯಲ್ಲಿ ರಕ್ತದ ಕಲೆಗಳು ಕಂಡು ಬಂದಿದೆ ಎನ್ನಲಾಗಿದೆ.

ಮಣಿಪಾಲದ ಖಾಸಗಿ ಸಂಸ್ಥೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದ ಚೆಲುವಿ, ತನ್ನಿಬ್ಬರ ಮಕ್ಕಳೊಂದಿಗೆ ತಾಯಿ ಮನೆಯಲ್ಲಿ ವಾಸವಿದ್ದರು. ಭಾನುವಾರ ಚೆಲುವಿ ಅವರ ತಾಯಿ ಮತ್ತು ಮಗ ಊರಿಗೆ ಹೋಗಿದ್ದಾರೆ. ಮನೆಯಲ್ಲಿ ಚೆಲುವಿ ಮತ್ತು ಮಗಳು ಮಾತ್ರ ಇದ್ದರು.  ಬೆಳಿಗ್ಗೆ ಸ್ಥಳೀಯ ಮನೆಯವರಿಗೆ ಕರೆ ಮಾಡಿ ಚೆಲುವಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಚೆಲುವಿಯ ತಾಯಿ ಮಾಹಿತಿ ನೀಡಿದ್ದು, ಸ್ಥಳೀಯರು ಮನೆಗೆ ತೆರಳಿದಾಗ ಬಾಗಿಲು ಅರ್ಧ ತೆರೆದಿದ್ದು, ಒಳ ಹೋಗಿ ನೋಡಿದಾಗ ಮೃತ ದೇಹ ಪತ್ತೆಯಾಗಿದೆ

ಸ್ಥಳದಲ್ಲಿ ಹೆಚ್ಚವರಿ ಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಸೇರಿದಂತೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು, ಎಫ್.ಎಸ್.ಎಲ್ ತಂಡ ಆಗಮಿಸಿ ಮಾಹಿತಿ ಕಲೆ ಹಾಕುತ್ತಿದೆ. ಹಿರಿಯಡ್ಕ ಠಾಣೆಯಲ್ಲಿ ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!