ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು ಬಾಲಕ ನಿರಂಜನ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಆರೊಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ್ವರು, ಮೃತ ಬಾಲಕನ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.ರಾಜ್ಯ ಸರ್ಕಾರ, ಬಿಬಿಎಂಪಿ, ಕಾಂಗ್ರೆಸ್ ವತಿಯಿಂದ ಪರಿಹಾರ ನೀಡಲಾಗುವುದು ಎಂದರು.
ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯಿಂದ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಕಮಿಟಿಯಿಂದ 5 ಲಕ್ಷ ರೂಪಾಯಿ ಪರಿಹಾರ. ಒಟ್ಟು 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಕಣ್ಣುಗಳ ದಾನ
ಮೃತ ಬಾಲಕ ತನ್ನ ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ.
ಇಂದು ಬಾಲಕನ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕುಟುಂಬಕ್ಕೆ ಮೃತದೇಹ ಹಸ್ತಾಂತರಿಸಲಾಗಿದೆ. ಬಾಲಕನ ಕಣ್ಣು ದಾನ ಮಡಲಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬಾಲಕನ ತಂದೆ ವಿಜಯ್ ಮಾಹಿತಿ ನೀಡಿದ್ದು, ಮಗ ನಿರಂಜನ್ ನ ಕಣ್ಣುಗಳನ್ನು ದಾನ ಮಾಡಿದ್ದೇವೆ. 10 ವರ್ಷದ ಮಗನನ್ನು ಕಳೆದುಕೊಂಡು ದಿಕ್ಕು ತೋಚದಾಗಿದ್ದೇವೆ. ಆದರೆ ನಮ್ಮ ಮಗನ ಕಣ್ಣುಗಳು ಇನ್ನೋಬ್ಬರ ಜೀವನದ ಬೆಳಕಾಗಿ, ಆ ಕಟ್ಟುಗಳು ಪ್ರಪಂಚವನ್ನು ನೋಡಲಿ ಎಂಬ ಕಾರಣಕ್ಕೆ ಮೃತ ಮಗನ ಕಣ್ಣುಗಳನ್ನು ದಾನ ಮಾಡಿರುವುದಾಗಿ ತಿಳಿಸಿದ್ದಾರೆ.