ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಷ್ಪ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಸಾವನಪ್ಪಿದ ಮಹಿಳೆಯ 9 ವರ್ಷದ ಮಗ ಶ್ರೀತೇಜಾಗೆ ಬ್ರೈನ್ ಡೆಡ್ ಆಗಿದ್ದು, ಇದರಿಂದ ಅಲ್ಲು ಅರ್ಜುನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಕುರಿತು ಹೈದ್ರಾಬಾದ್ ಸಿಟಿ ಪೊಲೀಸ್ ಕಮಿಷನರ್ ಸಿ.ವಿ ಆನಂದ್ ಮಾಹಿತಿ ನೀಡಿದ್ದಾರೆ.
ಬಾಲಕ ದಾಖಲಾಗಿದ್ದ ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಭೇಟಿ ನೀಡಿದ್ದರು. ಬಳಿಕ ಮಾತನಾಡಿದ ಅವರು ಕಾಲ್ತುಳಿತದ ಸಂದರ್ಭದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬಾಲಕ ಶ್ರೀತೇಜ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು. ಇದೀಗ ಬಾಲಕನ ಮೆದುಳು ನಿಷ್ಕ್ರಿಯಗೊಂಡಿದೆ. ಸದ್ಯ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ದೀರ್ಘಾವಧಿಯಾಗುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ರೀತೇಜಾ ಅವರ ಆರೋಗ್ಯದ ಕುರಿತು ಶೀಘ್ರದಲ್ಲೇ ವೈದ್ಯಕೀಯ ಬುಲೆಟಿನ್ ಅನ್ನು ಸಹ ವೈದ್ಯರು ಬಿಡುಗಡೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಶ್ರೀ ತೇಜಾ ಆರೋಗ್ಯ ಪರಿಸ್ಥಿತಿ ಮಾನಿಟರ್ ಮಾಡುತ್ತಿದ್ದೇವೆ. ಆದಷ್ಟು ಬೇಗ ಶ್ರೀ ತೇಜ ಗುಣಮುಖರಾಗಲಿ ಎಂಬುವುದು ನಮ್ಮ ಬಯಕೆ. ಇದಕ್ಕಾಗಿ ಎಲ್ಲಾ ಪ್ರಯತ್ನ ಮಾಡುತ್ತೇವೆ. ವೈದ್ಯರ ತಂಡ ಸಂಪೂರ್ಣ ನಿಗಾ ವಹಿಸಿದೆ ಎಂದು ಡಾ.ಕ್ರಿಸ್ಟಿನಾ ಹೇಳಿದ್ದಾರೆ. ಶ್ರೀ ತೇಜಾ ಉಳಿಸಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ. ಶ್ರೀ ತೇಜಾ ತಂದೆ ಜೊತೆ ಚರ್ಚಿಸಲಾಗಿದೆ. ಶ್ರೀ ತೇಜಾ ತಂದೆಗೆ ಎಲ್ಲಾ ನೆರವು ನೀಡಲಾಗುತ್ತದೆ. ಶ್ರೀ ತೇಜಾ ಚಿಕಿತ್ಸೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.