ಮೊಬೈಲ್‌ ನೋಡುತ್ತಾ ಕುಳಿತಿದ್ದ ಬಾಲಕ ಇದ್ದಕ್ಕಿದ್ದಂತೆಯೇ ಪ್ರಾಣಬಿಟ್ಟ, ಕಾರಣ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಪ್ರದೇಶದ ಅಮ್ರೋಹಾದಲ್ಲಿ 16 ವರ್ಷದ ಬಾಲಕ ಮೊಬೈಲ್ ಫೋನ್ ನೋಡುತ್ತಿದ್ದಾಗಲೇ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

ಹತ್ತನೇ ತರಗತಿ ಬಾಲಕ ಅಮನ್ ಖುರೇಷಿ ಮೊಬೈಲ್ ಫೋನ್ ನೋಡುತ್ತಿದ್ದಾಗ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಆದರೆ ಆಸ್ಪತ್ರೆಯಲ್ಲಿ ಅಮನ್‌ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಹಾರ್ಟ್ ಅಟ್ಯಾಕ್‌ನಿಂದ ಪ್ರಾಣ ಬಿಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮೃತಪಟ್ಟ ಬಾಲಕ ಮೊಬೈಲ್ ಫೋನ್‌ನಲ್ಲಿ ವಿಡಿಯೋ ನೋಡುತ್ತಿದ್ದಾಗ ಈ ದುರಂತ ನಡೆದಿದೆ. ಮರಣೋತ್ತರ ಪರೀಕ್ಷೆ ನಂತರ ನಿಖರವಾದ ಕಾರಣ ತಿಳಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!