ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷ್ಣ ನದಿಯ ಆರ್ಭಟಕ್ಕೆ ಕುಡಚಿ ಉಗಾರಖುರ್ದ್ ಮಧ್ಯೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದ್ದು ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಸಂಪರ್ಕ ಸ್ಥಗಿತಗೊಂಡಿದೆ.
ರಾಯಭಾಗ ತಾಲೂಕಿನಲ್ಲಿರುವ ಬೃಹತ್ ಕುಡಚಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಸಂಪರ್ಕ ಕಡಿತಗೊಂಡಿದೆ.
ಸದ್ಯ ಕೃಷ್ಣೆಯಲ್ಲಿ 1.50 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು ಮಹಾರಾಷ್ಟ್ರ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಕ್ಷಣ ಕ್ಷಣಕ್ಕೂ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ.