ದಿಗಂತ ವರದಿ ಕಲಬುರಗಿ :
ಮಹಾರಾಷ್ಟ್ರದ ಉಜನಿ ಹಾಗೂ ವೀರ ಭಟ್ಕರ್ ಜಲಾಶಯದಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿರುವುದರಿಂದ ಅಫಜಲ್ಪುರ ತಾಲೂಕಿನ ಮಣ್ಣೂರ ಗ್ರಾಮದ ಭೀಮಾ ನದಿಯಲ್ಲಿರುವ ಶ್ರೀ ಯಲ್ಲಮ್ಮ ದೇವಿ ದರ್ಶನಕ್ಕೆ ಹೋಗುವ ಸಂಪರ್ಕ ಸೇತುವೆ ಸಂಪೂರ್ಣ ಜಲಾವೃತವಾಗಿದೆ.
ಇದರಿಂದ ಭಕ್ತರು ಬವಣೆಗೆ ಒಳಗಾಗಿದ್ದಾರೆ. ಮಹಾರಾಷ್ಟ್ರದ ವ್ಯಾಪಕ ಮಳೆಯಿಂದಾಗಿ ಕಲಬುರಗಿ ಸುತ್ತಮುತ್ತ ಜನಜೀವನ ತೀವ್ರ ಬಾಧಿತವಾಗಿದೆ.