ವಿಧಾನಸೌಧದ ಮುಂದೆ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಕಂಚಿನ ಪ್ರತಿಮೆ ಅನಾವರಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ(ಕೆ.ಚಂಗಲರಾಯ ರೆಡ್ಡಿ) ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮುಂದೆ ಅನಾವರಣಗೊಳಿಸಿದರು. ವಿಧಾನಸೌಧ ಆವರಣದ ಪಶ್ಚಿಮ ಭಾಗದಲ್ಲಿ ನಿರ್ಮಾಣವಾಗಿರುವ ಪ್ರತಿಮೆಯನ್ನು ಸಿಎಂ ಹಾಗೂ ಕುಟುಂಬಸ್ಥರು ಒಟ್ಟಾಗಿ ಅನಾವರಣ ಮಾಡಿದರು. ಕಾರ್ಯಕ್ರಮದಲ್ಲಿ ಸಚಿವರಾದ ಸುಧಾಕರ್, ಆನಂದ್ ಸಿಂಗ್, ಕೆ.ಸಿ.ರೆಡ್ಡಿ ಕುಟುಂಬಸ್ಥರು ಸೇರಿದಂತೆ ಹಲವರು ಭಾಗಿಯಾಗಿದರು.

ಪ್ರತಿಮೆ ಅನಾವರಣದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಕಳೆದ ವರ್ಷ ಕೆ. ಸಿ. ರೆಡ್ಡಿ ಅವರ 120ನೇ ಜನ್ಮದಿನಾಚಾರಣೆಯ ಅಂಗವಾಗಿ ಪುತ್ಥಳಿ ನಿರ್ಮಿಸುವುದಾಗಿ ಸಿಎಂ ಘೋಷಿಸಿದ್ದರು ಅಂತೆಯೇ ಇಂದು ವಿಧಾನಸೌಧದ ಆವರಣದಲ್ಲಿ ಕೆ.ಸಿ.ರೆಡ್ಡಿ  ಕಂಚಿನ ಪ್ರತಿಮೆ ತಲೆ ಎತ್ತಿದೆ.

ಈ ಸಂದರ್ಭದಲ್ಲಿ ಕೆ.ಸಿ.ರೆಡ್ಡಿ ಅವರ ಆಡಳಿತ, ಕೊಡುಗೆ, ಸಾರ್ವಜನಿಕ ಜೀವನದ ಬಗ್ಗೆ ಮುಖ್ಯಮಂತ್ರಿಗಳು ನೆನಪು ಮಾಡಿಕೊಂಡರು. ಆಧುನಿಕ ಕರ್ನಾಟಕ ಹಾಗೂ ಬೆಂಗಳೂರಿನ ಬೇರುಗಳಿಗೆ ನೀರು ಹಾಕಿ ಬೆಳೆಸಿದವರು ಎಂದು ಸಿಎಂ ವರ್ಣಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!