ಹೊಸದಿಗಂತ ವರದಿ, ಮಂಡ್ಯ:
ಸ್ಟೇರಿಂಗ್ ರಾಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸು ಟೋಲ್ ರಸ್ತೆಯಿಂದ ಸರ್ವೀಸ್ ರಸ್ತೆಗೆ ನುಗ್ಗಿ ಹಳ್ಳಕ್ಕೆ ಇಳಿದ ಪರಿಣಾಮ 8 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗಾರಮದಲ್ಲಿ ನಡೆದಿದೆ.
ಚಾಲಕ ಶೇಖರ್, ದೀಪಕ್, ಭಾಸ್ಕರ್, ಅಭಿ, ಕುಶಾಲ್, ನಾಗರಾಜು, ನಿರ್ವಾಹಕ ರವಿಚಂದ್ರ ಸೇರಿದಂತೆ 8 ಮಂದಿ ಗಾಯಗೊಂಡವರಾಗಿದ್ದಾರೆ.
ಮಂಡ್ಯದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ಸು ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಬಳಿ ಟೋಲ್‌ರಸ್ತೆಯಲ್ಲಿ ಚಲಿಸುತ್ತಿದ್ದಾಗ ಬಸ್ಸಿನ ಸ್ಟೇರಿಂಗ್ ರಾಡ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಸರ್ವೀಸ್ ರಸ್ತೆಗೆ ನುಗ್ಗಿತ್ತು. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು, ಸ್ಟೇರಿಂಗ್ ರಾಡ್(ಲೆನ್ಸ್ ರಾಡ್) ಕಟ್ ಆಗಿದ ತಕ್ಷಣವೇ ಚಾಲಕ ಹರಸಾಹಸಪಟ್ಟು ಬಸ್ ಕಂಟ್ರೋಲ್‌ಗೆ ತೆಗೆದುಕೊಳ್ಳಲು ಹೋಗಿದ್ದು, ಬಸ್ ವೇಗದಲ್ಲಿದ್ದ ಕಾರಣ ಸರ್ವೀಸ್ ರಸ್ತೆಗೆ ಇಳಿದು ಹಳ್ಳಕ್ಕೆ ನುಗ್ಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.