ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದ ಬಸ್; 8 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್‌ನ ಬಟಿಂಡಾದಲ್ಲಿ ಖಾಸಗಿ ಬಸ್ ಚರಂಡಿಗೆ ಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ.

ಅಪಘಾತದ ವೇಳೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ ಎಂದು ಶಾಸಕ ಜಗರೂಪ್ ಸಿಂಗ್ ಗಿಲ್ ತಿಳಿಸಿದ್ದಾರೆ.

ಸದ್ಯ ಗಾಯಗೊಂಡಿರುವ 18 ಪ್ರಯಾಣಿಕರು ಚಿಕಿತ್ಸೆ ಪಡೆಯುತ್ತಿರುವ ಬಟಿಂಡಾ ನಗರದ ಶಹೀದ್ ಭಾಯಿ ಮಣಿ ಸಿಂಗ್ ಸಿವಿಲ್ ಆಸ್ಪತ್ರೆಗೆ ಶಾಸಕರು ಭೇಟಿ ನೀಡಿ, ಡಾ. ರಮಣದೀಪ್ ಸಿಂಗ್ಲಾ ಅವರಿಂದ ಮಾಹಿತಿ ಪಡೆದಿದ್ದಾರೆ.
ತಲವಾಂಡಿ ಸಾಬೋದಿಂದ ಬಟಿಂಡಾ ನಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಬಟಿಂಡಾದ ಜಿವಾನ್ ಸಿಂಗ್ ವಾಲಾ ಗ್ರಾಮದ ಬಳಿ ಸ್ಕಿಡ್ ಆಗಿ ಸೇತುವೆಗೆ ಅಪ್ಪಳಿಸಿ, ಕೆಳಗಿದ್ದ ಚರಂಡಿಗೆ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. ಎನ್‌ಡಿಆರ್‌ಎಫ್, ಪೊಲೀಸರು ಮತ್ತು ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೃತರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.

ಅಪಘಾತ ಸಂಭವಿಸಿದಾಗ ಬಟಿಂಡಾದಲ್ಲಿ ಮಳೆಯಾಗುತ್ತಿದ್ದು, ಅಪಘಾತದ ಕಾರಣವನ್ನು ತನಿಖೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!