ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮರನಾಥ ಯಾತ್ರೆ ಮುಗಿಸಿ ಪಂಜಾಬ್‌ನ ಹೋಶಿಯಾರ್‌ಪುರಕ್ಕೆ ಹಿಂದಿರುಗುತ್ತಿರುವಾಗ ಬಸ್ನ ಬ್ರೇಕ್ ಫೇಲ್ ಆಗಿದ್ದು, ಜನ ಪ್ರಾಣ ಉಳಿಸಿಕೊಳ್ಳಲು ಬಸ್‌ನಿಂದ ಹಾರಿ ಬಿದ್ದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಪಂಜಾಬ್‌ನ ಹೋಶಿಯಾರ್‌ಪುರಕ್ಕೆ ಹಿಂತಿರುಗುತ್ತಿದ್ದ ಸುಮಾರು 40 ಯಾತ್ರಾರ್ಥಿಗಳನ್ನು ಹೊತ್ತ ಬಸ್, ಬ್ರೇಕ್ ವೈಫಲ್ಯದಿಂದಾಗಿ ಬನಿಹಾಲ್ ಬಳಿಯ ನಚ್ಲಾನಾದಲ್ಲಿ ನಿಲ್ಲಿಸಲು ವಿಫಲವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆ ಹಾಗೂ ಪೊಲೀಸ್ ಸಿಬ್ಬಂದಿ ಬಸ್ ಅನ್ನು ಕಷ್ಟಪಟ್ಟು ತಡೆದಿದ್ದಾರೆ, ಹೀಗಾಗಿ ಜಮ್ಮು-ಕಾಶ್ಮೀರ ಹೆದ್ದಾರಿಯಲ್ಲಿ ಸಂಭಾವ್ಯ ಅಪಘಾತವನ್ನು ತಪ್ಪಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಲಿಸುತ್ತಿದ್ದ ಬಸ್‌ನಿಂದ ಹತ್ತು ಮಂದಿ ಕೆಳಗೆ ಹಾರಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ, ಮೂವರು ಮಹಿಳೆಯರು ಹಾಗೂ ಮಗು ಕೂಡ ಗಾಯಗೊಂಡಿದೆ.
ಚಲಿಸುತ್ತಿದ್ದ ವಾಹನದಿಂದ ಯಾತ್ರಾರ್ಥಿಗಳು ಜಿಗಿಯುತ್ತಿರುವುದನ್ನು ಗಮನಿಸಿದ ಸೇನಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿದರು ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ.
J&K: #Brakes of #bus carrying #Amarnath pilgrims failed. #Pilgrims #jumped from the moving bus to save their lives. The #army stopped the bus by putting up a barrier. This bus was returning from Amarnath to #Hoshiarpur (#Punjab).#Jammu #Kashmir #Yatra #Watch #Exclusive #Breaking… pic.twitter.com/LNeSUJlYi0
— 6 Block South Patel Nagar (NGO REGD)🇮🇳 (@NgoPatelNagar) July 3, 2024