April 2, 2026
Thursday, April 2, 2026
spot_img

ಭರ್ಜರಿ ರಂಗೇರಿದೆ ಉಪಚುನಾವಣಾ ಕಣ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ-ಬಿಜೆಪಿ ಘಟಾನುಘಟಿಗಳ ಮೊಕ್ಕಾಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:


ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಕಾರ್ಯವು ದಿನದಿಂದ ದಿನಕ್ಕೆ ಚುರುಕು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಹಿರಿಯ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದು, ಭರ್ಜರಿ ಮತಯಾಚನೆಯಲ್ಲಿ ತೊಡಗಿದ್ದಾರೆ.


ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಮಲ್ಲಿಕಾರ್ಜುನ್ ಪರವಾಗಿ ಸತತ ಎರಡನೇ ದಿನವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗ ಪ್ರಚಾರ ನಡೆಸಿದರು.


ಈ ಸಂದರ್ಭದಲ್ಲಿ ಮಾಜಿ ಸಭಾಪತಿ ಬಿ.ಎಲ್. ಶಂಕರ್, ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಸೇರಿದಂತೆ ಪಕ್ಷದ ಅನೇಕ ಪ್ರಮುಖ ಮುಖಂಡರು ಮುಖ್ಯಮಂತ್ರಿಗಳ ಜೊತೆಗೂಡಿ ಮತದಾರರ ಮನಗೆಲ್ಲಲು ಪ್ರಯತ್ನಿಸಿದರು.


ಮತ್ತೊಂದೆಡೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಪರವಾಗಿ ಕ್ಷೇತ್ರದ ವಿವಿಧ ಭಾಗಗಳಲ್ಲಿ ಬಿಜೆಪಿ ನಾಯಕರ ದಂಡೇ ಪ್ರಚಾರ ನಡೆಸಿತು. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಡಾ. ಜಿ.ಎಂ. ಸಿದ್ದೇಶ್ವರ್, ಬಿ. ಶ್ರೀರಾಮುಲು, ಎಂ.ಪಿ. ರೇಣುಕಾಚಾರ್ಯ ಮತ್ತು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಗಣ್ಯರು ರೋಡ್ ಶೋ ಹಾಗೂ ಸಭೆಗಳನ್ನು ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !