ಕಾರು-ಬಸ್​ ನಡುವೆ ಭೀಕರ ಅಪಘಾತ: ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಕಾರು ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಸಕಲೇಶಪುರ ತಾಲೂಕಿನ ಬಾಳೆಗದ್ದೆ ಬಳಿ ಕೆಎಸ್​ಆರ್​ಟಿಸಿ ಬಸ್ ಮತ್ತು ಓಮ್ನಿ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಮೋಹನ್​-ಶಾರದಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!