ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಕೋಡಾ ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗೇಟ್ ಬಳಿ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದಾಗ ಘಟನೆ ನಡೆದಿದೆ. ಸರ್ವಿಸ್ ರಸ್ತೆಗೆ ಪ್ರವೇಶಿಸುವಾಗ ವೇಗದ ಚಾಲನೆಯಿಂದಾಗಿ ಕಾರು ನಿಯಂತ್ರಣ ತಪ್ಪಿ ಕೆರೆಗೆ ಹಾರಿದೆ. ಘಟನೆಯಿಂದಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಂತ್ರಸ್ತರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.