ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಕಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ಕಾಪು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಸಣ್ಣಪುಟ್ಟ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಕಾರು ಸಾಗುತ್ತಿತ್ತು ಎನ್ನಲಾಗುವ ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ನೋವು ಉಂಟಾಗಲಿಲ್ಲ. ಯಾವುದೇ ದೂರನ್ನು ಕಾರಿನವರು ದಾಖಲಿಸಿಲ್ಲ ಎಂದು ತಿಳಿದು ಬಂದಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!