ಹೊಸದಿಗಂತ ವರದಿ, ಮಂಡ್ಯ : ಅಂಕೋಲಾ:
ಅಂಕೋಲಾ:
ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ ಪಟ್ಟು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನೋರ್ವ ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೊಡಸಣಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.
ಹೊನ್ನಾವರ ನಿವಾಸಿ ರಮೇಶ ಶಿವಾನಂದ ನಾಯ್ಕ (32) ಮೃತ ವ್ಯಕ್ತಿಯಾಗಿದ್ದು ದಿನೇಶ ನಾಯ್ಕ ಎಂಬಾತ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ನಟ್ಟು ಅಪಾಯದಿಂದ ಪಾರಾಗಿದ್ದಾನೆ.
ಹೊನ್ನಾವರದಿಂದ ಅಂಕೋಲಾ ಕಡೆ ಬರುತ್ತಿದ್ದ ಕಾರು ಕೊಡಸಣಿ ಸೇತುವೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲ ಬದಿಯಲ್ಲಿ ಪಲ್ಟಿಯಾಗಿದ್ದು ರಸ್ತೆಯ ಇನ್ನೊಂದು ಬದಿಗೆ ಸಿಡಿದು ಬಿದ್ದ ಚಾಲಕ ರಮೇಶ ಶಿವಾನಂದ ನಾಯ್ಕನಿಗೆ ಗಂಭೀರವಾದ ಗಾಯಗಳಾಗಿ ಆತ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಅಂಕೋಲಾ ಪೊಲೀಸ್ ನಿರೀಕ್ಷಕ ಚಂದ್ರಶೇಖರ ಮಠಪತಿ, ಪಿ.ಎಸ್. ಐ ಜಯಶ್ರೀ ಪ್ರಭಾಕರ್, ಸುನೀಲ ಹುಲ್ಲೋಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.