Friday, November 21, 2025

ಕಾರ್ಡ್‌ ರದ್ದಾಗುತ್ತಿಲ್ಲ, ತೆರಿಗೆ ಪಾವತಿಸುವವರ ಬಿಪಿಎಲ್ ಕಾರ್ಡ್‌, ಎಪಿಎಲ್ ಆಗಿ ಬದಲಾವಣೆಯಾಗ್ತಿದೆ: ಸಚಿವ ಮುನಿಯಪ್ಪ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಳಸಂತೆಯಲ್ಲಿ ರೇಷನ್ ಅಕ್ಕಿ ಮಾರಾಟವಾಗುತ್ತಿರುವುದಕ್ಕೆ ಕಡಿವಾಣ ಹಾಕಲು ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರ್ಡ್‌ಗಳು ರದ್ದಾಗುತ್ತಿಲ್ಲ. ತೆರಿಗೆ ಕಟ್ಟುತ್ತಿರುವವರಿಗೆ ಮಾತ್ರ ಬಿಪಿಎಲ್ ಕಾರ್ಡ್‌ನಿಂದ ಎಪಿಎಲ್ ಕಾರ್ಡ್‌ಗಳಾಗಿ ಬದಲಾವಣೆಯಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಪಿಎಲ್ ಕಾರ್ಡ್‌ಗಳ ಮಾನದಂಡ ಪರಿಷ್ಕರಣೆಯ ಬಗ್ಗೆ ಚರ್ಚೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಕೆಲವು ಮಾನದಂಡಗಳನ್ನು ಸರಳೀಕರಣಗೊಳಿಸಲಾಗುವುದು ಎಂದು ಹೇಳಿದ್ದಾರೆ.

error: Content is protected !!