ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ಮಧ್ಯೆ ಇಂದು ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಮೇಲ್ ಮೂಲಕ ಬೆದರಿಕೆ ಬಂದಿದೆ.
ದೆಹಲಿಯ ದೀಪ್ ಚಂದ್ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಗೆವಾರ್ ಆಸ್ಪತ್ರೆಗೆ ಬೆದರಿಕೆ ಬಂದಿದೆ. ಸದ್ಯ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ. ಬೆದರಿಕೆ ಮೇಲ್‌ನ ಮೂಲವನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ರಾಷ್ಟ್ರ ರಾಜಧಾನಿಯ ನಾಲ್ಕು ಆಸ್ಪತ್ರೆಗಳಿಗೆ ಪೊಲೀಸ್ ತಂಡಗಳನ್ನು ರವಾನಿಸಲಾಗಿದೆ.