ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾಲೂರಿನಲ್ಲಿ ಶಾಲಾ ಮಕ್ಕಳನ್ನು ಮಲದ ಗುಂಡಿಗಿಳಿಸಿ ಸ್ವಚ್ಚಗೊಳಿಸಿದ ಘಟನೆಯನ್ನು ರಾಜ್ಯ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ನೈತಿಕ ಹೊಣೆ ಹೊರಬೇಕು ಎಂದು ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಮಕ್ಕಳ ಮೇಲಿನ ದೌರ್ಜನ್ಯ ಕೋಲಾರದ ಮಾಲೂರು ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ನಡೆದಿರುವುದು ನೋಡಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರದ ಹಳಿತಪ್ಪಿದ ಆಡಳಿತದಲ್ಲಿ ಮಹಿಳೆಯರು ಹಾಗೂ ಮಕ್ಕಳು ಸುರಕ್ಷಿತವಾಗಿರಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿರುವುದು ಬಿಂಬಿತವಾಗುತ್ತಿದೆ. ಅದರಲ್ಲೂ ಪರಿಶಿಷ್ಟ ಸಮುದಾಯಕ್ಕೆ ಸೇರಿದವರೇ ದೌರ್ಜನ್ಯ, ಶೋಷಣೆಗೆ ಗುರಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದ್ದಾರೆ
ಮಲದ ಗುಂಡಿಗಿಳಿಸಿ ದೈಹಿಕ ದೌರ್ಜನ್ಯ ನಡೆಸಿರುವುದು ಅತ್ಯಂತ ಹೇಯ ಘಟನೆ
ಮಾಲೂರಿನ ಘಟನೆಯಲ್ಲಿ ಮಕ್ಕಳನ್ನು ಮಲದ ಗುಂಡಿಗಿಳಿಸಿ ದೈಹಿಕ ದೌರ್ಜನ್ಯ ನಡೆಸಿರುವುದು ಅತ್ಯಂತ ಹೇಯ ಘಟನೆ. ಬಿಜೆಪಿ ಬಲವಾಗಿ ಖಂಡಿಸುತ್ತದೆ. ಅಲ್ಲದೇ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ನೈತಿಕ ಹೊಣೆ ಹೊರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರೀಯವಾಗಿದೆ: ಬೊಮ್ಮಾಯಿ
ರಾಜ್ಯದಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ದೌರ್ಜನ್ಯ ಮಾಡಲಾಗಿದೆ. ಮಾಲೂರು ತಾಲೂಕಿನಲ್ಲಿ ದಲಿತ ಶಾಲಾ ಮಕ್ಕಳನ್ನು ಮಲದ ಗುಂಡಿಗಿಳಿಸಿ ಸ್ವಚ್ಚ ಮಾಡಲು ಬಳಕೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರೀಯವಾಗಿದೆ. ಯಾರಿಗೂ ಭಯ ಇಲ್ಲ. ಸರ್ಕಾರ ಅಧಿಕಾರಿಗಳ ಮೇಲೆ ಸಂಪೂರ್ಣ ಹಿಡಿತ ಕಳೆದುಕೊಂಡಿದೆ. ಇಲ್ಲಿ ಮಹಿಳೆಯರು, ಮಕ್ಕಳು, ದಲಿತರಿಗೆ ಸುರಕ್ಷತೆ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಇದ್ದೂ ಸತ್ತಂತಾಗಿದ್ದು, ನಿರ್ಜೀವ ಸರ್ಕಾರಕ್ಕೆ ರಾಜ್ಯದ ಜನತೆ ಹಿಡಿಶಾಪ ಹಾಕುವಂತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ರಾಜ್ಯದಲ್ಲಿ ಹೆಣ್ಣು ಮಕ್ಕಳ ಬ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೇಗೊಳಿಸಿ ದೌರ್ಜನ್ಯ ಮಾಡಲಾಗಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ ದಲಿತ ಶಾಲಾ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಚ ಮಾಡಲು ಬಳಕೆ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರೀಯವಾಗಿದೆ.…
— Basavaraj S Bommai (@BSBommai) December 17, 2023
ಸರ್ಕಾರ ಕಠಿಣ ಕ್ರಮ ಜರಗಿಸಲಿ
ಕೋಲಾರದಲ್ಲಿ ನಡೆದ ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಗುರುಗಳು ಮಕ್ಕಳಿಗೆ ಸುಜ್ಞಾನವನ್ನು ನೀಡುವ ಬದಲಾಗಿ ಈ ರೀತಿಯಾದ ಅಪಾಯವಾದ ಕೆಲಸಕ್ಕೆ ನಿಯೋಜನೆ ಮಾಡಿ ಅವರ ಜೀವಕ್ಕೆ ಸಂಚಕಾರ ಮಾಡುವ ಕೆಲಸ ಮಾಡುತ್ತಿರುವುದು ಅಮಾನವೀಯ, ಹೇಯ ಹಾಗೂ ಖಂಡನೀಯ ಮತ್ತು ಇದು ಶಿಕ್ಷಾರ್ಹ ಅಪರಾಧ. ಅದೂ ಅಲ್ಲದೆ, ಅಪ್ರಾಪ್ತ ವಯಸ್ಸಿನ ಮಕ್ಕಳಿಂದ ಈ ರೀತಿಯಾದ ಅಪಾಯಕಾರಿ ಕೆಲಸ ಮಾಡಿಸುವುದು ಸಹ ಕಾನೂನುರೀತ್ಯ ಅಪರಾಧವಾಗುತ್ತದೆ. ಹಾಗಾಗಿ ತಪ್ಪಿತಸ್ಥರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ, ಸರ್ಕಾರ ಕಠಿಣ ಕ್ರಮ ಜರುಗಿಸಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.