ಸಲಿಂಗ ಕಾಮ ಪ್ರಕರಣ; ಸೂರಜ್‌ ರೇವಣ್ಣ ಜೈಲಿನಿಂದ ರಿಲೀಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ದಾಖಲಾಗಿದ್ದ ಎರಡು ಪ್ರಕರಣದಲ್ಲೂ ಎಂಎಲ್‌ಸಿ ಸೂರಜ್‌ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಒಂದು ತಿಂಗಳ ಜೈಲು ವಾಸದ ಬಳಿಕ ರಿಲೀಸ್‌ ಆಗಿದ್ದಾರೆ.

ತನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ, ಶೀಘ್ರ ಸತ್ಯ ಹೊರ ಬರಲಿದೆ. ಎಲ್ಲದಕ್ಕೂ ಎರಡು-ಮೂರು ದಿನಗಳಲ್ಲಿ ಉತ್ತರ ನೀಡುವುದಾಗಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರ ಅಪರಾಹ್ನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್‌ ರೇವಣ್ಣ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು.

ಹೊಳೆನರಸೀಪುರ ಟೌನ್‌ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮೊದಲಿಗೆ ಸೂರಜ್‌ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು‌ ಮಂಜೂರು ಮಾಡಿತ್ತು. ಬಳಿಕ ಸೋಮವಾರ ಎರಡನೇ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!