ಗನ್ ಇಟ್ಕೊಂಡು ಸಿಎಂಗೆ ಹಾರ ಹಾಕಿದ ಪ್ರಕರಣ: ಪಿಎಸ್​ಐ ಸೇರಿ ನಾಲ್ವರು ಸಸ್ಪೆಂಡ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ(Siddaramaiah) ಅವರಿಗೆ ಗನ್ ಇಟ್ಕೊಂಡು ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಲೋಪ ಸಂಬಂಧ ಪಿಎಸ್​ಐ, ಎಎಸ್​ಐ ಸೇರಿ ಒಟ್ಟು ನಾಲ್ವರನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ದಯಾನಂದ್ ಬಿ‌. ಆದೇಶಿಸಿದ್ದಾರೆ.

ಇದೇ ತಿಂಗಳ 8ರಂದು ಸಿಎಂ ಸಿದ್ದರಾಮಯ್ಯ ಪ್ರಚಾರದ ವೇಳೆ ರಿಯಾಜ್ ಎಂಬಾತ ಪಿಸ್ತೂಲ್ ಇಟ್ಕೊಂಡು ಬಂದು ಹಾರ ಹಾಕಿದ್ದನು. ಈ ಘಟನೆ ಸಾಕಷ್ಟು ಟೀಕೆಗೆ ಗುರಿಯಾಗಿತ್ತು.

ಬಳಿಕ ಆತನನ್ನು ಸಿದ್ದಾಪುರ ಪೊಲೀಸ್ರು ವಿಚಾರಣೆ ನಡೆಸಿ ಕಳುಹಿಸಿದ್ದರು. ಘಟನೆಯಾದ ಎರಡು ವಾರಗಳ ನಂತರ ಸಿಎಂ ಭದ್ರತಾ ಕರ್ತವ್ಯದಲ್ಲಿದ್ದ ಸಿದ್ದಾಪುರ ಸಬ್ ಇನ್ಸ್ಪೆಕ್ಟರ್ ಮೆಹಬೂಬ, ASI ನಾಗರಾಜು ಹಾಗೂ ಇಬ್ಬರು ಸಿಬ್ಬಂದಿ ಅಮಾನತು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!