ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಚೆನ್ನಯ್ಯನ ಎಸ್‌ಐಟಿ ಕಸ್ಟಡಿ ಇಂದು ಅಂತ್ಯಗೊಂಡಿದ್ದು, ಈ ಹಿನ್ನಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಅಧಿಕಾರಿಗಳು ಮತ್ತೆ ಮೂರು ದಿಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಸಮಾಧಿ ಶೋಧ ಪ್ರಕ್ರಿಯೆ ಬಳಿಕ ಎಸ್‌ಐಟಿ ಚೆನ್ನಯ್ಯನನ್ನು ಬಂಧಿಸಿತ್ತು. ಅದಾದ ಬಳಿಕ ಹೆಚ್ಚಿನ ವಿಚಾರಣೆ ಅಗತ್ಯವಿರುರುವ ಹಿನ್ನಲೆಯಲ್ಲಿ ಆತನನ್ನು ೧೨ ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡಿತ್ತು. ಇದೀಗ ಕಸ್ಟಡಿ ಅವಧಿ ಪೂರ್ಣಗೊಂಡಿದ್ದು, ವಿಚಾರಣೆ ಇನ್ನೂ ಅಗತ್ಯವಿರುವ ಹಿನ್ನೆಲೆಯಲ್ಲಿ ಮತ್ತೆ ಮೂರು ದಿನ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಈ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ. ಸೆ.೬ರಂದು ಚಿನ್ನಯ್ಯನನ್ನು ಎಸ್‌ಐಟಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗಿದೆ.