ಹೊಸದಿಗಂತ ಡಿಜಿಟಲ್ ಡೆಸ್ಕ್;
ಧಾರವಾಡದ ಎಎಸ್‌ಪಿ ಆಗಿದ್ದ ನಾರಾಯಣ.ವಿ.ಭರಮನಿ ಅವರ ಮೇಲೆ ಕೈಎತ್ತಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು ಕೋರಿ ಭೀಮಪ್ಪ ಗಡಾದ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಜಾ ಮಾಡಿದೆ.
ಕೆಲ ತಿಂಗಳುಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನಕ್ಕೆ ಆಕ್ರೋಶಗೊಂಡಿದ್ದ ಸಿದ್ದರಾಮಯ್ಯ, ವೇದಿಕೆ ಮೇಲೆಯೇ ಧಾರವಾಡ ಎಎಸ್‌ಪಿ ನಾರಾಯಣ.ವಿ.ಭರಮನಿ ಅವರ ಮೇಲೆ ಕೈ ಎತ್ತಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಇನ್ನು ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು ಕೋರಿ ಭೀಮಪ್ಪ ಗಡಾದ ಎನ್ನುವರು ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಿದ್ದು, ಇದನ್ನು ಇಂದು (ಡಿಸೆಂಬರ್ 10) ಪರಿಶೀಲನೆ ಮಾಡಿದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಅವರು ಭೀಮಪ್ಪ ಗಡಾದ ಸಲ್ಲಿಸಿದ್ದ ಖಾಸಗಿ ದೂರು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

