ಚೀನಾ ಗಡಿ ಸಮೀಪದ ಗ್ರಾಮಗಳಮೂಲಸೌಕರ್ಯ ಸುಧಾರಿಸೋಕೆ ಬರೋಬ್ಬರಿ 4,800 ಕೋಟಿ ರೂ. ಅನುದಾನಕ್ಕೆ ಒಪ್ಪಿಗೆ ನೀಡಿದ ಕೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚೀನಾ ಗಡಿ ಪ್ರದೇಶದಲ್ಲಿನ ಗ್ರಾಮಗಳ ಮೂಲಸೌಕರ್ಯಾಭಿವೃದ್ಧಿ ಮತ್ತು ಇಲ್ಲಿನ ಜನರ ಜೀವನ ಗುಣಮಟ್ಟ ಸುಧಾರಿಸಲು ಕೇಂದ್ರ ಸರ್ಕಾರವು ಬರೋಬ್ಬರಿ 4,800 ಕೋಟಿ ರೂಪಾಯಿಗಳ ಅನುದಾನಕ್ಕೆ ಅನುಮೋದನೆ ನೀಡಿದೆ. ಸರಿಯಾದ ಸೌಲಭ್ಯಗಳಿಲ್ಲದ ಕಾರಣ ಈ ಭಾಗದ ಜನರು ಹೆಚ್ಚಿನ ಪ್ರಮಾಣದಲ್ಲಿ ವಲಸೆ ಹೋಗುತ್ತಿದ್ದಾರೆ. ಹಾಗಾಗಿ ಇದನ್ನು ತಡೆದು ಜೀವನದ ಗುಣಮಟ್ಟವನ್ನು ಸುಧಾರಿಸಲು ಮತ್ತು ಗಡಿ ಪ್ರದೇಶಗಳಲ್ಲಿ ಜನರು ತಮ್ಮ ಸ್ಥಳೀಯ ಸ್ಥಳಗಳಲ್ಲಿ ನೆಲೆ ನಿಲ್ಲುವಂತೆ ಮಾಡಲು ಮುಂದಿನ ನಾಲ್ಕು ವರ್ಷಗಳವರೆಗೆ ಅನ್ವಯವಾಗುವಂತೆ 4,800 ಕೋಟಿ ರೂ. ಕೇಂದ್ರ ಪ್ರಾಯೋಜಿತ ಯೋಜನೆಯನ್ನು ಪ್ರಕಟಿಸಲಾಗಿದೆ.

‘ವೈಬ್ರಂಟ್ ವಿಲೇಜಸ್ ಪ್ರೋಗ್ರಾಂ’ ಹೆಸರಿನಲ್ಲಿ ಈ ಯೋಜನೆಗೆ ಕೇಂದ್ರ ಸಚಿವಸಂಪುಟ ಅನುಮೋದನೆ ನೀಡಿದೆ. ಇದರ ಅಡಿಯಲ್ಲಿ ಉತ್ತರದ ಗಡಿ ಭಾಗದ ಗ್ರಾಮಗಳ ಸಮಗ್ರ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಒಟ್ಟಾರೆಯಾಗಿ 4,800 ಕೋಟಿ ರೂ.ಗಳ ಹಣಕಾಸು ಹಂಚಿಕೆಯಾಗಿದ್ದು ಇದರಲ್ಲಿ 2,500 ಕೋಟಿ ರೂ.ಗಳನ್ನು ರಸ್ತೆಗಳ ನಿರ್ಮಾಣಕ್ಕೆ ಬಳಸಲಾಗುತ್ತದೆ.

“ಈ ಯೋಜನೆಯು ದೇಶದ ಉತ್ತರ ಭೂ ಗಡಿಯಲ್ಲಿರುವ 19 ಜಿಲ್ಲೆಗಳು ಮತ್ತು 46 ಬಾರ್ಡರ್ ಬ್ಲಾಕ್‌ಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದಲ್ಲಿ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಜೀವನೋಪಾಯದ ಅವಕಾಶಗಳ ಸೃಷ್ಟಿಗೆ ಹಣವನ್ನು ಒದಗಿಸುತ್ತದೆ, ಇದು ಸಮಗ್ರ ಬೆಳವಣಿಗೆಯನ್ನು ಸಾಧಿಸಲು ಮತ್ತು ಜನಸಂಖ್ಯೆಯನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಮೊದಲ ಹಂತದಲ್ಲಿ ಇಲ್ಲಿನ 663ಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!