ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸನಗೌಡ ಪಾಟೀಲ ಯತ್ನಾಳ್ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ, ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಈ ವಿಚಾರದಲ್ಲಿ ಯಾರೂ ಮಾತನಾಡದಂತೆ ಕೇಂದ್ರ ನಾಯಕರು ಸೂಚನೆ ನೀಡಿದ್ದಾರೆ. ಹೀಗಾಗಿ, ಉಚ್ಚಾಟನೆ ಕುರಿತು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಪಕ್ಷವು ಒಳ್ಳೆಯ ತೀರ್ಮಾನ ಕೈಗೊಳ್ಳುವ ವಿಶ್ವಾಸ ಇದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಯ ಉಮಾಭಾರತಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಆರು ವರ್ಷದ ಬಳಿಕ ಪಕ್ಷಕ್ಕೆ ಹಿಂತಿರುಗಿದಾಗ ಅವರಿಗೆ ಸಕ್ರಿಯವಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಈಗ ಯತ್ನಾಳ ವಿಚಾರದಲ್ಲಿಯೂ ಮುಂದೆ ಈ ರೀತಿಯಾಗದಂತೆ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದರು.
ಜೊತೆಗೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗಿದೆ ಜೊತೆಗೆ ಮುಂದಿನ ದಿನಗಳಲ್ಲಿ ಪಕ್ಷವು ಒಳ್ಳೆಯ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.