ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ಹರಡುವಿಕೆಯ ತೀವ್ರತೆ ಪೂರ್ತಿ ತಗ್ಗಿಲದ ಹಿನ್ನೆಲೆ ಮತ್ತು ಈ ರೋಗ ಸಾವರ್ಜನಿಕೆ ಆರೋಗ್ಯದ ಸವಾಲಾಗಿ ಮುಂದುವರೆಯುವುದರಿಂದ ದೇಶಾದ್ಯಂತ ಕೋವಿಡ್-19 ಕಂಟೈನ್ ಮೆಂಟ್ ಕ್ರಮಗಳನ್ನು ಕೇಂದ್ರ ಸರ್ಕಾರ ನವೆಂಬರ್ 30 ರವರೆಗೆ ವಿಸ್ತರಿಸಿದೆ.
ಕುರಿತಂತೆ ಕೇಂದ್ರ ಮತ್ತು ರಾಜ್ಯಾಡಳಿತಗಳಿಗೆ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಪತ್ರ ಬರೆದಿದ್ದು, ಮಹಾಮಾರಿ ಕೋವಿಡ್ ಹರಡುವಿಕೆಯನ್ನು ತಡೆಯಲು ಜಾರಿಯಲ್ಲಿರುವ ಪ್ರೋಟೋಕಾಲ್ಗಳನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗುವುದಾಗಿ ತಿಳಿಸಿದ್ದಾರೆ.
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಮತ್ತು ಸಕ್ರೀಯ ಸೋಂಕಿತರ ಸಂಖ್ಯೆ ಕ್ಷೀಣಿಸುತ್ತಿದೆ. ಆದರೆ ಕೆಲವು ರಾಜ್ಯಗಳಲ್ಲಿ ಸ್ಥಳೀಯವಾಗಿ ವೈರಸ್ ಹರಡುತ್ತಿದೆ. ಈ ಹಿನ್ನೆಲೆ ಪ್ರೋಟೋಕಾಲ್ ಗಳನ್ನು ಮುಂದಿನ ತಿಂಗಳ ಅಂತ್ಯದವರೆಗೂ ವಿಸ್ತರಿಸಲಾಗಿದೆ ಎಂದು ಭಲ್ಲಾ ತಿಳಿಸಿದ್ದಾರೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ವ್ಯಾಪ್ತಿಯಲ್ಲಿರುವ ಪ್ರತಿ ಜಿಲ್ಲೆಯ ಕೋವಿಡ್ ಪಾಸಿಟಿವಿಟಿ ದರ, ಆಸ್ಪತ್ರೆ, ಐಸಿಯು ಬೆಡ್ಗಳ ಆಕ್ಯುಪೆನ್ಸಿಯನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕು ಬಲ್ಲಾ ಅವರು ಪತ್ರದಲ್ಲಿ ಸೂಚಿಸಿದ್ದಾರೆ.