ವಿಧಾನಸಭೆ ಚುನಾವಣೆ: ರಾಜ್ಯದಲ್ಲಿ ಸಿದ್ಧತೆ ಪರಿಶೀಲಿಸಿದ ಕೇಂದ್ರ ಚುನಾವಣಾ ಆಯೋಗದ ತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕದಲ್ಲಿ ಪೂರ್ವ ಸಿದ್ಧತೆ ಪ್ರಾರಂಭಿಸಿದೆ.

ಇದಕ್ಕೆ ಪೂರಕವಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಆಯೋಗದ ಆಯುಕ್ತ ಅಜಯ್‌ ಭಾದೂ, ಕಾರ್ಯದರ್ಶಿ ಬಿ.ಸಿ. ಪಾತ್ರ ಅರನ್ನೊಳಗೊಂಡ ತಂಡ, ಪೂರ್ವ ತಯಾರಿ ಕುರಿತಂತೆ ಪರಿಶೀಲನೆ ನಡೆಸಿದೆ.

ಎರಡು ದಿನಗಳ ಈ ಭೇಟಿಯಲ್ಲಿ ತಂಡವು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಿದೆ.

ರಾಜ್ಯದ 224 ಕ್ಷೇತ್ರಗಳ ಕುರಿತು ಜಿಲ್ಲಾ ಚುನಾವಣಾಧಿಕಾರಿ ಜತೆ ಸಭೆ ನಡೆಸಿರುವ ತಂಡ, ಮತದಾರರ ಗುರುತೀಚೀಟಿ ಬಿಡುಗಡೆ ಕುರಿತೂ ಚರ್ಚಿಸಿದ್ದು ಚುನಾವಣ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!