ಸೆಪ್ಟೆಂಬರ್ 18 ರಿಂದ ವಿಶೇಷ ಅಧಿವೇಶನ ಕರೆದ ಕೇಂದ್ರ ಸರ್ಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೇಂದ್ರ ಸರ್ಕಾರ ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲು ನಿರ್ಧರಿಸಿದೆ.

ಈ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನವನ್ನು (17 ನೇ ಲೋಕಸಭೆಯ 13 ನೇ ಅಧಿವೇಶನ ಮತ್ತು ರಾಜ್ಯಸಭೆಯ 261 ನೇ ಅಧಿವೇಶನ) ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ಅಧಿವೇಶನಗಳೊಂದಿಗೆ ಕರೆಯಲಾಗಿದೆ.

ಈ ಹಿಂದೆ, ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ಮತ್ತು ಆಗಸ್ಟ್ 11 ರ ನಡುವೆ ನಡೆಯಿತು

ಇದೀಗ ಈ ವರ್ಷದ ಕೊನೆಯಲ್ಲಿ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗೆ ಪಕ್ಷಗಳು ಸಜ್ಜಾಗುತ್ತಿರುವುದರಿಂದ ವಿಶೇಷ ಅಧಿವೇಶನದ ಘೋಷಣೆ ರಾಜಕೀಯ ವಲಯದಲ್ಲಿ ಬಹಳ ಕುತೂಹಲ ಮೂಡಿಸಿದೆ. ಸಂಸತ್ತಿನ ಚಳಿಗಾಲದ ಅಧಿವೇಶನವು ಸಾಮಾನ್ಯವಾಗಿ ನವೆಂಬರ್ ಕೊನೆಯ ವಾರದಲ್ಲಿ ಪ್ರಾರಂಭವಾಗುತ್ತದೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ನಡೆಯುತ್ತಿರುವ ಈ ಅಧಿವೇಶನದಲ್ಲಿ ಕೆಲವೊಂದು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆಯಿದ್ದು, ಹೀಗಾಗಿ ಈ ಅಧಿವೇಶನದ ಕುರಿತು ಕುತೂಹಲ ಹೆಚ್ಚಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!