ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ ಆದ ಖರ್ಚಿನ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಕೈಗೊಳ್ಳುತ್ತಿರುತ್ತಾರೆ. ಈ ಮೂಲಕ ಇತರ ರಾಷ್ಟ್ರಗಳ ಜೊತೆಗೆ ಭಾರತದ ಸಂಬಂಧವನ್ನು ಮತ್ತಷ್ಟು ವೃದ್ಧಿಸಿದ್ದಾರೆ.

ಆದರೆ ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ ಭಾರತದಲ್ಲಿನ ವಿಪಕ್ಷಗಳು ಹಲವು ಬಾರಿ ಟೀಕೆ ವ್ಯಕ್ತಪಡಿಸಿದೆ. ಪ್ರಧಾನಿ ತೆರಿಗಾರರ ದುಡ್ಡಲ್ಲಿ ಫಾರಿನ್ ಟೂರ್ ಮಾಡುತ್ತಿದ್ದಾರೆ. ಕೋಟಿ ಕೋಟಿ ಖರ್ಚು ಮಾಡುತ್ತಿದ್ದಾರೆ ಅನ್ನೋ ಆರೋಪಗಳನ್ನು ಮಾಡಿದೆ.

ಇದೀಗ ಕೇಂದ್ರ ವಿದೇಶಾಂಗ ಇಲಾಖೆಯ ರಾಜ್ಯ ಸಚಿವ ಮರಳೀಧರನ್ ಮೋದಿ ಖರ್ಚು ವೆಚ್ಚದ ಕುರಿತು ಮಾಹಿತಿ ಬಹಿರಂಗ ಪಡಿಸಿದ್ದಾರೆ. ಕಳೆದ 5 ವರ್ಷದಲ್ಲಿ ಪ್ರಧಾನಿ ಮೋದಿ ಪ್ರತಿ ವಿದೇಶ ಪ್ರವಾಸಕ್ಕೂ ಖರ್ಚಾದ ಮೊತ್ತವೆಷ್ಟು ಬಹಿರಂಗಪಡಿಸಿದ್ದಾರೆ.

ಇತ್ತೀಚೆಗೆ ಇಂಡೋನೇಷಿಯಾಲ್ಲಿ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಇದೇ ಶೃಂಗಸಭೆಯಲ್ಲಿ ಜಿ20 ಶೃಂಗಸಭೆಯ ಅಧ್ಯಕ್ಷತೆಯನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ. ಪ್ರಈ ಪ್ರವಾಸಕ್ಕೆ ಕೇಂದ್ರ ಸರ್ಕಾರ 32,09,760 ರೂಪಾಯಿ ಖರ್ಚು ಮಾಡಿದೆ ಎಂದು ಮರಳೀಧರನ್ ಹೇಳಿದ್ದಾರೆ.

ಸೆಪ್ಟೆಂಬರ್ 26 ರಿಂದ 28ರವರೆಗೆ ಪ್ರಧಾನಿ ಮೋದಿ ಜಪಾನ್ ಪ್ರವಾಸ ಮಾಡಿದ್ದರು. ಈ ಪ್ರವಾಸಕ್ಕಾಗಿ ಕೇಂದ್ರ ಸರ್ಕಾರ 23,86,536 ರೂಪಾಯಿ ವೆಚ್ಚ ಮಾಡಿದೆ. ಇನ್ನು ಈ ವರ್ಷದ ಆರಂಭದಲ್ಲಿ ಮೋದಿ ಯೂರೋಪ್ ಪ್ರವಾಸಕ್ಕೆ ಕೇಂದ್ರ ಸರ್ಕಾರ 2,15,61,304 ಖರ್ಚು ಮಾಡಿದೆ. 2019ರಲ್ಲಿ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದರು. ಸೆಪ್ಟೆಂಬರ್ 21 ರಿಂದ 28 ರವರೆಗಿನ ಅಮೆರಿಕ ಪ್ರವಾಸಕ್ಕೆ 23,27,09,000 ರೂಪಾಯಿ ಖರ್ಚು ಮಾಡಲಾಗಿದೆ.

ಪ್ರಧಾನಿ ಮೋದಿ ವಿದೇಶ ಪ್ರವಾಸ ಭಾರತದ ಹಿತ ದೃಷ್ಟಿಯಿಂದ ಕೂಡಿದೆ. ಭಾರತದ ವಿದೇಶಾಂಗ ನೀತಿ ಹಾಗೂ ಭಾರತದ ಜನರಿಗಾಗಿ ಈ ಪ್ರವಾಸಗಳು ಅತೀ ಅವಶ್ಯಕ ಹಾಗೂ ಅನಿವಾರ್ಯವಾಗಿದೆ ಎಂದು ಸಚಿವ ಮರಳೀಧರನ್ ಹೇಳಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!