ಕರ್ನಾಟಕಕ್ಕೆ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ: ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರ ರಾಜ್ಯಕ್ಕೆ ಮಗದೊಂದು ಕೊಡುಗೆ ನೀಡಿದೆ. ಅದೇನೆಂದರೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು.

ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರದ ಮತ್ತೊಂದು ಗಿಫ್ಟ್ ರಾಜ್ಯಕ್ಕೆ ಕೇಂದ್ರ ನೀಡಿದೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ.

ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಗೆ ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಅಶ್ವಿನಿ ವೈಷ್ಣವ್ ಅವರಿಗೆ ಜುಲೈ ಮೊದಲ ವಾರದಲ್ಲಷ್ಟೇ ಪತ್ರ ಬರೆದು ಮನವಿ ಮಾಡಿದ್ದರು. ರಾಜ್ಯದಲ್ಲಿ ಬೆಂಗಳೂರು ನಂತರ ಪ್ರಮುಖ ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕಿದೆ. ಅಲ್ಲದೇ, ವಂದೇ ಭಾರತ್ ರೈಲು ಸಂಚಾರದಿಂದ ಈ ಭಾಗದ ವಾಣಿಜ್ಯೋದ್ಯಮ, ಕೈಗಾರಿಕಾ ವಸಾಹತು ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂದು ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು.

ಉದ್ಘಾಟನೆ ದಿನ, ವೇಳಾಪಟ್ಟಿ ಶೀಘ್ರ ಪ್ರಕಟ:
ವಂದೇ ಭಾರತ್ ರೈಲು ಸಂಚಾರದ ಉದ್ಘಾಟನೆ ದಿನ ಮತ್ತು ವೇಳಾ ಪಟ್ಟಿಯನ್ನು ರೈಲ್ವೆ ಇಲಾಖೆ ಆದಷ್ಟು ಬೇಗ ಪ್ರಕಟಿಸಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಪ್ರಧಾನಿಗೆ, ರೈಲ್ವೆ ಸಚಿವರಿಗೆ ಧನ್ಯವಾದ:
ನಮ್ಮ ವಿಭಾಗದ ರೇಲ್ವೆ ಅಭಿವೃದ್ಧಿಗೆ, ವಿಕಾಸಕ್ಕೆ ಪ್ರಧಾನಿ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಮೂಲಕ ಮಹತ್ವದ ಕೊಡುಗೆ ನೀಡಿದ್ದು, ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸುವೆ ಎಂದು ತಿಳಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!